ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ-2018-19

ಉಜಿರೆ: ದ.ಕ. ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಬೆಳ್ತಂಗಡಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳು ಉಜಿರೆ ಇದರ ಸಂಯುಕ್ತ ಅಶ್ರಯದಲ್ಲಿ ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ-2018-19 ಅ.22 ರಂದು ಉಜಿರೆ ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ಜರುಗಿತು.
ಕ್ರೀಡಾಕೂಟವನ್ನು ಶಾಸಕ ಹರೀಶ್ ಪೂಂಜ ದೀಪ ಪ್ರಜ್ವಲಿಸಿ, ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಧ್ವಜಾರೋಹಣವನ್ನು ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ ಶೆಟ್ಟಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಶ್ರೀಮತಿ ಕಸ್ತೂರಿ ಪಂಜ, ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜೋತಿ, ತಾ.ಪಂ ಸದಸ್ಯರಾದ ಶಶಿಧರ ಕಲ್ಮಂಜ, ಜಿ.ಪಂ ಮಮತಾ ಎಂ ಶೆಟ್ಟಿ, ಕೊರಗಪ್ಪ ನಾಯ್ಕ, ಬಾಲಭಾಸ್ಕರ್, ಕೃಷ್ಣಾನಂದ ರಾವ್, ರಮೇಶ್, ಕ್ಷೇತ್ರ ಶಿಕ್ಷಣಾಧಿಕಾರು ಗುರುಪ್ರಸಾದ್, ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಶಿವರಾಮಯ್ಯ, ಎಸ್‌ಡಿಎಂ ಸೆಕೆಂಡರಿ ಶಾಲಾ ಮುಖ್ಯ ಶಿಕ್ಷಕಿ ಚಂದ್ರಿಕಾ, ತಾ. ದೈಹಿಕ ಶಿಕ್ಷಣಶಿಕ್ಷಕರ ಸಂಘದ ಅಧ್ಯಕ್ಷ ಯುವರಾಜ ಅನಾರು, ಜಿಲ್ಲಾಧ್ಯಕ್ಷ ಕೆ.ಹೆಚ್ ನಾಯಕ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರಘುನಾಥ್, ಕಬಡ್ಡಿ ತೀರ್ಪುಗಾರರ ಮಂಡಳಿ ಜಿಲ್ಲಾಧ್ಯಕ್ಷ ಕೃಷ್ಣಾನಂದ ರಾವ್ ಮುಂಡಾಜೆ, ರಮೇಶ ಮಯ್ಯ, ರಾಮಕೃಷ್ಣ ಭಟ್ ಚೊಕ್ಕಾಡಿ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್, ಶೇಖರ ಕಡ್ತಲ, ತಾಲೂಕು ಯುವ ಸಬಲೀಕರಣ ಕ್ರೀಡಾಧಿಕಾರಿ ಪ್ರಭಾಕರ ನಾರಾವಿ, ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.