ಧರ್ಮಸ್ಥಳದಲ್ಲಿ ಪಟ್ಟಾಭಿಷೇಕ ಸುವರ್ಣ ಮಹೋತ್ಸವ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾಗಿ, 50 ವರ್ಷಗಳ ಸೇವೆಯನ್ನು ಪೂರೈಸಿರುವ ಪೂಜ್ಯ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕ ಸುವರ್ಣ ಮಹೋತ್ಸವವು ಅ.24 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೆರವೇರಿಸಿದರು.
ವೇದಿಕೆಯಲ್ಲಿ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ, ಲೋಕೋಪಯೋಗಿ ಇಲಾಖೆ ಸಚಿವ ಹೆಚ್.ಡಿ. ರೇವಣ್ಣ, ಸಂಸದ ನಳಿನ್ ಕುಮಾರ್ ಕಟೀಲ್, ವಸತಿ ಮತ್ತು ನಗರಾಭಿವೃದ್ಧಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಮಾಣಿಲ ಶ್ರೀಧಾಮದ ಯೋಗಿ ಕೌಸ್ತುಭ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ರಾಜ್ಯ ಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಪತ್ನಿ ಭ್ಲೋಸಂ ಫೆರ್ನಾಂಡಿಸ್, ಡಿ. ಸುರೇಂದ್ರ ಕುಮಾರ್, ಶೃದ್ಧಾ ಅಮಿತ್, ಅಮಿತ್ ತುಮಕೂರು, ಹೆಗ್ಗಡೆಯವರ ಸಹೋದರಿ ಪದ್ಮಲತಾ ನಿರಂಜನ್ ಕುಮಾರ್ ಧಾರವಾಡ, ಡಾ| ನಿರಂಜನ್ ಕುಮಾರ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಬಿ. ಯಶೋವರ್ಮ , ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಸರಕಾರಿ ಅಧಿಕಾರಿ ಶ್ರೀನಿವಾಸ್, ಜಿಲ್ಲಾ ಪೊಲೀಸ್ ಎಸ್.ಪಿ ಡಾ| ರವಿಕಾಂತೇ ಗೌಡ, ಹೆಚ್ಚುವರಿ ಎಸ್.ಪಿ ಸಜಿತ್ ವಿ.ಜಿ ಉಪಸ್ಥಿತರಿದ್ದರು. ಈ ಸಂಧರ್ಭದಲ್ಲಿ ಕ್ಷೇತ್ರದ ಸಿಬ್ಬಂದಿಗಳಿಂದ ಹೆಗ್ಗಡೆಯವರಿಗೆ ಸನ್ಮಾನ ನೆರವೇರಿತು.
ಡಿ. ಹಷೇಂದ್ರ ಕುಮಾರ್ ಸ್ವಾಗತಿಸಿ, ಶಾಲಿನಿ, ಸೀತಾರಾಮ ತೋಳ್ಪಾಡಿತ್ತಾಯ, ಜನಾರ್ದನ ತೋಳ್ಪಡಿತ್ತಾಯ, ಗಿರೀಶ್ ಹೆಗ್ಡೆ ಇವರು ಯಕ್ಷಗಾನ ಶೈಲಿಯಲ್ಲಿ ಪ್ರಾರ್ಥನೆ ನೆರವೇರಿಸಿದರು. ದಾಮೋದರ ಶರ್ಮ ಬಾರ್ಕೂರು ಕಾರ್ಯಕ್ರಮ ನಿರೂಪಿಸಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್.ಹೆಚ್ ಮಂಜುನಾಥ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.