HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಗ್ರಾ.ಪಂ ಮಡಂತ್ಯಾರು: ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ವಿವಿಧ ಸವಲತ್ತುಗಳ ವಿತರಣೆ

   

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 14ನೇ ಹಣಕಾಸು ಯೋಜನೆಯಡಿ ನಿರ್ಮಿಸಲಾದ ಬಾಪೂಜಿ ಸೇವಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ ಮತ್ತು ಕುಕ್ಕಳಬೆಟ್ಟು ಹಿಂದೂ ರುದ್ರಭೂಮಿ ಲೋಕಾರ್ಪಣೆ ಹಾಗೂ ವಿವಿಧ ಸವಲತ್ತು ವಿತರಣಾ ಸಮಾರಂಭವು ಅ.27 ರಂದು ಗ್ರಾ.ಪಂ ಸಭಾಭವನದಲ್ಲಿ ಜರುಗಿತು.
ಸೇವಾ ಕೇಂದ್ರದ ಉದ್ಘಾಟನೆಯನ್ನು ರಾಜ್ಯ ವಿಧಾನಸಭಾ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ಜಿ.ಪಂ ಸದಸ್ಯೆ ಮಮತಾ ಶೆಟ್ಟಿ, ತಾ.ಪಂ ಸದಸ್ಯೆ ವಸಂತಿ ಲಕ್ಷ್ಮಣ ಕುಲಾಲ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ.ಬಿ, ದ.ಕ.ಜಿ.ಪ ಮಂಗಳೂರು ಸಹಾಯಕ ಕಾರ್ಯನಿರ್ವಹಣಾಧಿಕಾರಿ ಚೆನ್ನಪ್ಪ ಮೊಲಿ, ಶ್ರೀ.ಕ್ಷೇ.ಧ. ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಜಯಕರ ಶೆಟ್ಟಿ, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಮಹಾವಿದ್ಯಾಲಯದ ಪ್ರಾಚಾರ್ಯ ಅಲೆಕ್ಸ್ ಐವನ್ ಸಿಕ್ವೇರ, ಮಡಂತ್ಯಾರು ವಾಣಿಜ್ಯ, ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಬಿ, ಕುಕ್ಕಳಬೆಟ್ಟು ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಮಣ್ಣ ಮೂಲ್ಯ ಉಪಸ್ಥಿತರಿದ್ದರು. ಗ್ರಾ.ಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ಜಯಂತಿ ಪಿ, ಪಿಡಿಒ ನಾಗೇಶ್ ಎಂ, ಗ್ರಾ.ಪಂ ಸರ್ವ ಸದಸ್ಯರು, ಸಿಬ್ಬಂದಿವರ್ಗ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.