ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರ ಗುಂಪು ವಿಮಾ ಯೋಜನೆ ಪ್ರಗತಿ ರಕ್ಷಾಕವಚದ ಅನಾವರಣ ಸಮಾರಂಭವು ಅ.29 ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಭಾಗವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ ಹೆಗ್ಗಡೆ, ಭಾರತೀಯ ಜೀವ ವಿಮಾ ನಿಗಮ ಅಧ್ಯಕ್ಷ ವಿ.ಕೆ ಶರ್ಮ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಸುಳ್ಯ ಶಾಸಕ ಎಸ್ ಅಂಗಾರ, ಪುತ್ತೂರು ಶಾಸಕ ಸಂಜೀವ ಮಠಂದೂರು, ಡಿ.ಸುರೇಂದ್ರ ಕುಮಾರ್, ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಕ ನಿರ್ದೇಶಕ ಎಲ್ ಹೆಚ್ ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.