ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಇದರ ಆಶ್ರಯದಲ್ಲಿ ತಾಲೂಕು ಮಿನಿ ವಿಧಾನ ಸೌಧದ ಆವರಣದಲ್ಲಿ ಕನ್ನಡ ರಾಜ್ಯೋತ್ಸವ-2018 ಆಚರಿಸಲಾಯಿತು.
ಧ್ವಜಾರೋಹಣವನ್ನು ತಹಶಿಲ್ದಾರ್ ಮದನ್‌ಮೋಹನ್.ಸಿ ನೆರವೇರಿಸಿದರು, ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ,  ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ನಿವೃತ್ತ ಸೇನಾನಿ ಎಂ.ಆರ್ ಜೈನ್, ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಉಪಸ್ಥಿತರಿದ್ದರು. ಪ್ರಮುಖ ಭಾಷಣಕಾರರಾಗಿ ಉಜಿರೆ ಎಸ್‌ಡಿಎಂ ಕಾಲೇಜು ನಿವೃತ್ತ ಪ್ರಾಧ್ಯಾಪಕ ಪ್ರೊ| ಎನ್. ಟಿ ಪಟವರ್ಧನ್ ಉಪಸ್ಥಿತರಿದ್ದರು.
ಬೆಳ್ತಂಗಡಿ ತಾಲೂಕಿನ ಜಿ.ಪಂ ಸದಸ್ಯರು, ತಾ.ಪಂ ಸದಸ್ಯರು, ಗ್ರಾ.ಪಂ. ಸದಸ್ಯರು, ತಾಲೂಕು ಮಟ್ಟದ ಇಲಾಖಾ ಅಧಿಕಾರಿಗಳು, ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂಧರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿಯನ್ನು ಸಾರುವ  ನೃತ್ಯ ವಿನೋದಾವಳಿ ಪ್ರದರ್ಶನ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.