ಉಜಿರೆಯಲ್ಲಿ ರಾಷ್ಟ್ರೀಯ ಏಕತಾ ಓಟ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಸರ್ದಾರ್ ವಲ್ಲಭ ಬಾಯಿ ಪಟೇಲ್ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಏಕತಾ ಓಟ ನಡೆಯಿತು.
ಶಾಸಕ ಹರೀಶ್ ಪೂಂಜ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದ ಸರ್ದಾರ್ ವಲ್ಲಭ ಬಾಯಿ ಪಟೇಲರ ಜನ್ಮ ದಿನವನ್ನು ರಾಷ್ಟ್ರೀಯ ಏಕತಾ ದಿನವನ್ನಾಗಿ ರಾಷ್ಟ್ರದಾದ್ಯಂತ ಆಚರಿಸಲಾಗುತ್ತಿದ್ದು, ಯುವ ಶಕ್ತಿಯಲ್ಲಿ ಸ್ಪೂರ್ತಿ, ಚೈತನ್ಯವನ್ನು ಜಾಗೃತಗೊಳಿಸುವ ಕಾರ್ಯ ನಡೆಯುತ್ತಿದೆ. ನಾಡಿನ ಯುವಕರು ಐಕ್ಯತೆಯಿಂದ ರಾಷ್ಟ್ರ ರಕ್ಷಣೆಯ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಏಕತಾ ಓಟದಲ್ಲಿ ಜಯಂತ್ ಶೆಟ್ಟಿ, ಗೋಪಾಲಕೃಷ್ಣ ಕಾಂಚೊಡು, ರತ್ನವರ್ಮ ಜೈನ್, ರವಿಚಂದ್ರ ಚಕ್ಕಿತ್ತಾಯ, ಉದಯ ಸುಬ್ರಹ್ಮಣ್ಯ, ರಾಜೇಶ್ ಶೆಟ್ಟಿ, ಶ್ರೀನಿವಾಸ ರಾವ್, ದೇವಪ್ಪ ಗೌಡ, ಎಸ್‌ಡಿಎಂ ಕಾಲೇಜಿನ ಕ್ರೀಡಾಪಟುಗಳು, ವಿದ್ಯಾರ್ಥಿಗಳು, ಯುವಕರು, ಸಾರ್ವಜನಿಕರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.