ಶ್ರೀ ಮಂಜುನಾಥ ಸ್ವಾಮಿ ಹಿ.ಪ್ರಾಶಾಲೆ: ಕನ್ನಡ ರಾಜ್ಯೋತ್ಸವ

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಧರ್ಮಸ್ಥಳದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಶ್ರೀ ಧ. ಮ. ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿ ಉಪಸ್ಥಿತರಿದ್ದರು.
ಮುಖ್ಯೋಪಾಧ್ಯಾಯ  ಪಿ. ಸುಬ್ರಹ್ಮಣ್ಯ ರಾವ್ ಪಡ್ವೆಟ್ಟಾಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಭಾಷವಾರು ಪ್ರಾಂತ್ಯದಡಿ ವಿಭಜನೆಯಾದ ಮೈಸೂರು ರಾಜ್ಯವು 1973ರಲ್ಲಿ ಕರ್ನಾಟಕ ಎಂದು ಮರುನಾಮಕರಣಗೊಂಡಿತು. ಕನ್ನಡ ಭಾಷೆ, ನುಡಿಗಳನ್ನು ಉಳಿಸಿ ಬೆಳಸುವುದು ನಮ್ಮೆಲ್ಲರ ಕರ್ತವ್ಯ ಹಾಗೂ ಜವಾಬ್ದಾರಿಯಾಗಿದೆ ಎಂದರು. ಈ ಸಂದರ್ಭದಲ್ಲಿ ದಾನಿಗಳು ನೀಡಿದ ಸ್ಕೌಟ್ ಹಾಗೂ ಗೈಡ್ಸ್ ಮಕ್ಕಳ ಸಮವಸ್ತ್ರವನ್ನು ವಿತರಿಸಲಾಯಿತು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿ, ಶ್ರೀಮತಿ ಕಾವ್ಯ ಸ್ವಾಗತಿಸಿ, ಶೇಖರ್ ಗೌಡ ವಂದಿಸಿ, ವಿದ್ಯಾ ಸರಸ್ವತಿ ಹಾಗೂ ಶ್ರೀಮತಿ ಶೋಭಾ ಕಾರ್ಯಕ್ರಮ ನಿರೂಪಿಸಿದರು. ಎಲ್ಲಾ ಅಧ್ಯಾಪಕ ವೃಂದ ಹಾಗೂ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.