HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ರೋಗಿ ಆತ್ಮಹತ್ಯೆ

ಬೆಳ್ತಂಗಡಿ: ಇಲ್ಲಿಯ ಸರಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ಶೌಚಾಲಯದ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನ.4 ರಂದು ನಡೆದಿದೆ.
ಬೆಳ್ತಂಗಡಿ ಪರಿಸರದಲ್ಲಿ ಕೂಲಿ ಕಾರ್ಮಿಕರಾಗಿದ್ದ ರಮಾನಾಥ (47.ವ) ಅ.30 ರಂದು ಜೀರ್ಣಕ್ರಿಯೆ ಸಮಸ್ಯೆಗೆ ಸಂಬಂಧಿಸಿದಂತೆ ಒಬ್ಬರೇ ಬಂದು ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದರು.
ಈ ಹಿಂದೆಯೂ ಇವರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ತೆರಳಿದ್ದರು. ಆದರೆ ಆದಿತ್ಯವಾರ ಮುಂಜಾನೆ ಆಸ್ಪತ್ರೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ತಾನು ಸುಳ್ಯದ ಕುರುಂಜಿಬಾಗ್ ನಿವಾಸಿ ಎಂದು ವಿಳಾಸ ನೀಡಿದ್ದು, ಆತ್ಮಹತ್ಯೆ ವಿಚಾರ ತಿಳಿಸುವುದಕ್ಕಾಗಿ ಸುಳ್ಯಕ್ಕೆ ಸಂಪರ್ಕಿಸಿದಾಗ, ವಾರಸುದಾರರು ಪತ್ತೆಯಾಗಿಲ್ಲ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.