HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ನ.14: ಶಿಕ್ಷಣ ಸಂಪನ್ಮೂಲ ಕೇಂದ್ರದಿಂದ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ.

ಬೆಳ್ತಂಗಡಿ: ಮಕ್ಕಳ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ಶಿಕ್ಷಣ ಸಂಪನ್ಮೂಲ ಕೇಂದ್ರದ ವತಿಯಿಂದ ಮಾದಕ ವಸ್ತುಗಳಿಂದ ಮಕ್ಕಳ ಮೇಲಿನ ಪರಿಣಾಮ ಹಾಗೂ ಕನ್ನಡ ಶಾಲೆಗಳ ಸಬಲೀಕರಣ ಕಾರ್ಯಕ್ರಮವು ನ.14 ರಂದು ಬೆಳ್ತಂಗಡಿ ಸುವರ್ಣ ಆರ್ಕೆಡ್ ಸಭಾಭವನದಲ್ಲಿ ನಡೆಯಲಿದೆ ಎಂದು ಒಕ್ಕೂಟದ ಅಧ್ಯಕ್ಷ ಶ್ರೀಧರ್ ರಾವ್ ಹೇಳಿದರು.
ಅವರು ನ.5 ರಂದು ಪತ್ರಿಕಾಭವನದಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟ ಹಾಗೂ  ಕ್ರೀಡೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಆಂಗ್ಲಮಾಧ್ಯಮ ಶಾಲೆಯಲ್ಲಿ ಕಲಿತು ಕನ್ನಡ ವಿಷಯದಲ್ಲಿ ಶೇಕಡಾ 100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಲಿದೆ. ಈಗಾಗಲೇ 150 ವಿದ್ಯಾರ್ಥಿಗಳು ಹೆಸರು ನೊಂದಾಯಿಸಿದ್ದಾರೆ. ಜೊತೆಗೆ ಮಾದಕ ವಸ್ತುಗಳ ಮಾರಾಟ ಹಾಗೂ ಮಕ್ಕಳ ಮೇಲಿನ ಪರಿಣಾಮಗಳ ಕುರಿತು ಪೋಲಿಸ್ ಇಲಾಖೆಯೊಂದಿಗೆ ಸಂವಾದ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಒಕ್ಕೂಟದ ಕಾರ್ಯದರ್ಶಿ ಗೋಪಾಲಕೃಷ್ಣ, ಕೋಶಾಧಿಕಾರಿ ಝಾಕಿರ್ ಹುಸೇನ್, ಉಪಾಧ್ಯಕ್ಷೆ ಸಿ.ಕೆ.ಚಂದ್ರಕಲಾ ಹಾಗೂ ಸದಸ್ಯರುಗಳಾದ ವಾಲ್ಟರ್ ಜೆ ಪಿಂಟೊ,ಯಶೋಧಾ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.