ಬೆಳ್ತಂಗಡಿ ತಾಲೂಕು ಸ್ತ್ರೀಶಕ್ತಿ ಭವನ ಉದ್ಘಾಟನೆ

ಬೆಳ್ತಂಗಡಿ:  ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆ, ತಾಲೂಕು ಸ್ತ್ರೀಶಕ್ತಿ ಬ್ಲಾಕ್ ಸೊಸೈಟಿ ಸಹಯೋಗದಲ್ಲಿ ನಿರ್ಮಾಣಗೊಂಡ ಬೆಳ್ತಂಗಡಿ ತಾಲೂಕು ಸ್ತ್ರೀಶಕ್ತಿ ಭವನದ ಉದ್ಘಾಟನೆ ಕಾರ್ಯಕ್ರಮವು   ನ.9 ರಂದು ಜರುಗಿತು. ಶಾಸಕ ಹರೀಶ್ ಪೂಂಜ  ಸ್ತ್ರೀಶಕ್ತಿ ಭವನದ ಉದ್ಘಾಟನೆಯನ್ನು ನೆರವೇರಿಸಿದರು.
ತಾ.ಪಂ. ಉಪಾಧ್ಯಕ್ಷೆ ವೇದಾವತಿ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ಜಿ.ಪಂ ಸದಸ್ಯರಾದ ಕೊರಗಪ್ಪ ನಾಯ್ಕ, ಮಮತಾ.ಎಂ. ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಜಿ.ಪಂ ಸಹಾಯಕ ಕಾರ್ಯಪಾಲಕ ಇಂಜಿನಯರ್ ಚೆನ್ನಪ್ಪ ಮೊಲಿ, ಬ್ಲಾಕ್ ಸ್ತ್ರೀಶಕ್ತಿ ಸೊಸೈಟಿಯ ಅಧ್ಯಕ್ಷೆ ಯಶೋಧಾ ಮತ್ತಿತರರು ಉಪಸ್ಥಿತರಿದ್ದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಸ್ವಾಗತಿಸಿ, ಹಿರಿಯ ಮೇಲ್ವಿಚಾರಕಿ ಸುಧಾ ವಂದಿಸಿ, ಮೇಲ್ವಿಚಾರಕರಾದ ವಂದನಾ, ವಾಣಿಶ್ರೀ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.