ಗ್ರಾ.ಪಂ.ನಿಡ್ಲೆ: ವಿವಿಧ ಕಾಮಗಾರಿಗಳ ಉದ್ಘಾಟನೆ

Advt_NewsUnder_1
Advt_NewsUnder_1

ನಿಡ್ಲೆ: ನಿಡ್ಲೆ ಗ್ರಾ.ಪಂ ವ್ಯಾಪ್ತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅನುಷ್ಠಾನಗೊಂಡ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ನ. 11 ರಂದು ಜರುಗಿತು.
ಸನಿಲ ಎಂಬಲ್ಲಿ ಕಿಂಡಿ ಅಣೆಕಟ್ಟು ರಚನೆ, ಸನಿಲ ರಸ್ತೆ ಕಾಂಕ್ರಿಟೀಕರಣ, ಅಪ್ಪಿಂದ ಪಲ್ಕೆ ನಡುಗುಡ್ಡೆ ರಸ್ತೆ ಕಾಂಕ್ರಿಟೀಕರಣ , ಗ್ರಾ.ಪಂ ಕಛೇರಿ ಬಳಿ ಮಳೆ ನೀರು ಕೊಯ್ಲು ರಚನೆ ಈ ಕಾಮಗಾರಿಗಳ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ನಂತರ ಗ್ರಾ.ಪಂ ಕಛೇರಿ ವಠಾರದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶುಭಾ ದೇವಧರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಕ್ಷೇತ್ರದ ಜಿ.ಪಂ ಸದಸ್ಯ ಕೊರಗಪ್ಪ ನಾಯ್ಕ ಆಗಮಿಸಿದ್ದರು. ವೇದಿಕೆಯಲ್ಲಿ ಗ್ರಾ.ಪಂ ಉಪಾಧ್ಯಕ್ಷ ರುಕ್ಮಯ ಪೂಜಾರಿ, ಸದಸ್ಯರಾದ ಹರೀಶ್.ಪಿ, ರಾಮಣ್ಣ ಗೌಡ, ಭದ್ರಯ್ಯ ಗೌಡ, ಸುನೀತಾ, ಲಲಿತಾ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.