ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ನುಡಿನಮನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಇಂದು ನಿಧನರಾದ ಕೇಂದ್ರ ಸಚಿವ ಅನಂತ್ ಕುಮಾರ್ ಅವರಿಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ನುಡಿನಮನ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ನಡೆಯಿತು. ಬಿಜೆಪಿ ವಿಭಾಗ ಸಹಪ್ರಭಾರಿ ಪ್ರತಾಪಸಿಂಹ ನಾಯಕ್ ನುಡಿನಮನ ಸಲ್ಲಿಸಿ ಮಾತನಾಡಿ, ಅನಂತ ಕುಮಾರ್ ಅವರು ತನ್ನ ರಾಜಕೀಯ ಸೂಕ್ಷ್ಮತೆಯ ಕಾರಣದಿಂದ ಪಕ್ಷ ನೀಡಿದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ , ಯಶಸ್ವಿಯಾದ ರಾಜಕಾರಣಿ. ಅವರ ನಿಧನದಿಂದ ಪಕ್ಷಕ್ಜೆ ಹಾಗೂ ರಾಜ್ಯ, ರಾಷ್ಟ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಶಾಸಕ ಹರೀಶ್ ಪೂಂಜ ನಮನ ಸಲ್ಲಿಸಿ, ಅನಂತ ಕುಮಾರ್ ಅವರು ರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ರಾಷ್ಟ್ರದ ಎಲ್ಲಾ ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿ ವಹಿಸಿ, ಪಕ್ಷವನ್ನು ಅಧಿಕಾರಕ್ಕೆ ತಂದ ದಕ್ಷಿಣ ಭಾರತದ ನಾಯಕರು ಎಂದರು.
ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ , ಮುಖಂಡರಾದ ಕುಶಾಲಪ್ಪ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್., ಬಿಜೆಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್,  ಪ್ರಭಾಕರ ಶೆಟ್ಟಿ ಉಪ್ಪಡ್ಕ, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು, ಅನಂತ ಕುಮಾರ್ ಭಾವಚಿತ್ರಕ್ಕೆ  ಪುಷ್ಪಾರ್ಚಣೆಗೈದು ನುಡಿನಮನ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.