HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

“ಮಾದಕ ವಸ್ತುಗಳ ಮಾರಾಟದಿಂದ ಮಕ್ಕಳ ಮೇಲಾಗುವ ಪರಿಣಾಮ” ಕುರಿತು ಜಾಗೃತಿ ಕಾರ್ಯಕ್ರಮ

ಬೆಳ್ತಂಗಡಿ : ಶಿಕ್ಷಣ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ ತಾಲೂಕು ಘಟಕದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ “ಮಾದಕ ವಸ್ತುಗಳ ಮಾರಾಟದಿಂದ ಮಕ್ಕಳ ಮೇಲಾಗುವ ಪರಿಣಾಮ” ಕುರಿತು ಜಾಗೃತಿ ಹಾಗೂ ಸಾಧಕ ಮಕ್ಕಳಿಗೆ ಅಭಿನಂದನಾ ಸಮಾರಂಭವು ನ.14 ರಂದು ಬೆಳ್ತಂಗಡಿ ಸಂತೆಕಟ್ಟೆ ಸುವರ್ಣ ಆರ್ಕೇಡ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ  ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬೆಳ್ತಂಗಡಿ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಮಾತನಾಡಿ, ಸಮಾಜದಲ್ಲಿ ಉನ್ನತ ಸ್ಥಾನ ಪಡೆದು ತಮ್ಮ ಭವಿಷ್ಯ ರೂಪಿಸಿಕೊಳ್ಳಬೇಕಾದ ವಿದ್ಯಾರ್ಥಿಗಳು ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಎಳವೆಯಲ್ಲೇ ಈ ಕುರಿತು ಜಾಗೃತಿ ಮೂಡಿಸಬೇಕಾದ ಅನಿವಾರ್ಯ ಇದೆ ಎಂದು ಹೇಳಿದರು.

ವೇದಿಕೆಯಲ್ಲಿ ಪಡಿ ಸಂಸ್ಥೆಯ ತರಬೇತಿ ಸಂಯೋಜಕಿ ಕಸ್ತೂರಿ ಆರ್, ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್, ಭಾರತ್ ಸೇವಾದಳದ ರಾಜ್ಯ ಸಂಪನ್ಮೂಲ ವ್ಯಕ್ತಿ ಆಲ್ಫೋನ್ಸ್ ಫ್ರಾಂಕೋ, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಜಗದೀಶ್ ಪ್ರಸಾದ್, ಡಿಕೆಆರ್ ಡಿಎಸ್‌ನ ಸುನೀತಾ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷೆ ಮೇದಿನಿ ಡಿ. ಗೌಡ, ಗ್ರಾ.ಪಂ ನೌಕರರ ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ದೇವಿಪ್ರಸಾದ್ ಬೊಳ್ಮ, ಕೇಂದ್ರದ ಅಧ್ಯಕ್ಷ.ಕೆ ಶ್ರೀಧರ ರಾವ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.