65ನೇ ಅಖಿಲ ಭಾರತ ಸಹಕಾರ ಸಪ್ತಾಹ-2018 ಕಾರ್ಯಕ್ರಮದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯ ಸಹಕಾರ ಮಹಾಮಂಡಲ ಬೆಂಗಳೂರು, ಜಿಲ್ಲಾ ಸಹಕಾರಿ ಯೂನಿಯನ್, ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್, ತಾಲೂಕು ಸಹಕಾರಿ ಯೂನಿಯನ್, ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಹಭಾಗಿತ್ವದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ “65ನೇ ಅಖಿಲ ಭಾರತ ಸಹಕಾರ ಸಪ್ತಾಹ-2018” ಕಾರ್ಯಕ್ರಮವು ನ.15 ರಂದು  ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಕೇಂದ್ರ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಉದ್ಘಾಟಿಸಿದರು. ವೇದಿಕೆಯಲ್ಲಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್ ಅಧ್ಯಕ್ಷತೆಯನ್ನು ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಕೇಂದ್ರ ಬ್ಯಾಂಕಿನ ನಿರ್ದೇಶಕ ಬಿ. ನಿರಂಜನ,   ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಮಾಜಿ ಶಾಸಕರಾದ ಪ್ರಭಾಕರ ಬಂಗೇರ, ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ.ಸಲೀಂ, ಜಿಲ್ಲಾ ಸಹಕಾರಿ ಯೂನಿಯನ್ ಉಪಾಧ್ಯಕ್ಷ ಇಚ್ಚಿಲ ಸುಂದರ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ಪುತ್ತೂರು ಸಹಕಾರಿ ಸಂಘಗಳ ನಿಬಂಧಕ ಮಂಜುನಾಥ್, ಹಾಲು ಒಕ್ಕೂಟದ ನಿರ್ದೇಶಕ ಪದ್ಮನಾಭ ಅರ್ಕಜೆ, ಉಜಿರೆ ರಬ್ಬರ್ ಸೊಸೈಟಿ ಅಧ್ಯಕ್ಷ ಶ್ರೀಧರ ಜಿ. ಭಿಡೆ, ಒಕ್ಕೂಟದ ಉಪವ್ಯವಸ್ಥಾಪಕ ರಾಮಕೃಷ್ಣ ಭಟ್, ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಸಹಕಾರಿ ಅಭಿವೃದ್ಧಿ ಅಧಿಕಾರಿ ಸುಕನ್ಯಾ, ಸಂಘದ ಅಧ್ಯಕ್ಷ ಬಿ. ಮುನಿರಾಜ ಅಜ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್, ತಾಲೂಕಿನ ಎಲ್ಲಾ ಕೃಷಿಪತ್ತಿನ ಸಹಕಾರಿ ಸಂಘಗಳು, ಹಾಲು ಉತ್ಪಾದಕರ ಸಹಕಾರಿ ಸಂಘಗಳು, ಪ್ರಾಥಮಿಕ ಸಹಕಾರ ಸಂಘಗಳ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ನಿರ್ದೇಶಕರುಗಳು, ಸದಸ್ಯರು ಹಾಗೂ ಎಲ್ಲಾ ನವೋದಯ ಸ್ವಸಹಾಯ ಸಂಘದ ಸದಸ್ಯರುಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.