ನ.20-26: ಇಂದಬೆಟ್ಟು ಹಿ.ಪ್ರಾ ಶಾಲೆಯಲ್ಲಿ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯುತ್ತ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ನ.20 ರಿಂದ 26 ರವರೆಗೆ ಇಂದಬೆಟ್ಟು ದಕ್ಷಿಣ ಕನ್ನಡ ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಮಹತ್ಮಾ ಗಾಂಧಿ 150 ನೇ ವರ್ಷಾಚರಣೆ ಸಂದರ್ಭ ತನ್ನ ಸುವರ್ಣ ವರ್ಷಾಚರಣೆ ಆಚರಿಸಿಕೊಳ್ಳುತ್ತಿರುವ ಎನ್‌ಎಸ್‌ಎಸ್ ಘಟಕಗಳ ಕ್ಯಾಂಪ್ ಈ ಬಾರಿ ಹಲವು ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಂಡಿದೆ. ಶಾಲಾ ಆವರಣದಲ್ಲಿ ತೆಂಗಿನ ತೋಟ ನಿರ್ಮಾಣ, ಶಾಲಾ ಮೈದಾನದ ವಿಸ್ತರಣೆ, ಶಾಲಾ ವಿದ್ಯಾರ್ಥಿಗಳಿಗೆ ಬೋಧಪ್ರದ ಶೈಕ್ಷಣಿಕ ಕಾರ್ಯಕ್ರಮಗಳು, ಶಿಬಿರಾರ್ಥಿಗಳಿಗೆ ಪ್ರಶಿಕ್ಷಣ, ಸಾರ್ವಜನಿಕರಿಗಾಗಿ ಮಾಹಿತಿ ಕಾರ್ಯಕ್ರಮ ಹಾಗೂ ಆರೋಗ್ಯ ಮೇಳವನ್ನು ಆಯೋಜಿಸಲಾಗಿದೆ. ಶಾಸಕ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ರಾಜ್ಯ ಎನ್‌ಎಸ್‌ಎಸ್ ಅಧಿಕಾರಿ ಗಣನಾಥ ಶೆಟ್ಟಿ ಎಕ್ಕಾರು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.