ನ. 21: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಸಭಾಭವನದ ಶಿಲಾನ್ಯಾಸ

ಗೇರುಕಟ್ಟೆ: ಇಲ್ಲಿಯ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸುಮಾರು 50 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದುರ್ಗಾಪರಮೇಶ್ವರೀ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವು ನ.21 ರಂದು ನಡೆಯಲಿದೆ.
ಗುರುಪುರ ಶ್ರೀ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಶಿಲಾನ್ಯಾಸ ನೆರವೇರಿಸಿ, ಆಶೀರ್ವಚನ ನೀಡಲಿದ್ದಾರೆ. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಪುತ್ತೂರು ಆದರ್ಶ ಆಸ್ಪತ್ರೆಯ ಖ್ಯಾತ ವೈದ್ಯ ಡಾ| ಪ್ರಸಾದ್ ಭಂಡಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ನಿರ್ದೇಶಕ ಜಯರಾಮ ನೆಲ್ಲಿತ್ತಾಯ, ಮಕ್ಕಳ ತಜ್ಞರಾದ ಡಾ| ಸದಾಶಿವ ರಾವ್.ಪಿ, ಬೆಳ್ತಂಗಡಿ ನ್ಯಾಯವಾದಿ ಅಜಿತ್.ಎನ್ ನಾವರ, ಮಂಗಳೂರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಜಯಂತ ನಡುಬೈಲು, ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರ ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ಬೆಳ್ತಂಗಡಿ ಪಟ್ಟಣ ಪಂಚಾಯತ್ ಸದಸ್ಯ ಜಯಾನಂದ ಗೌಡ, ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.