HomePage_Banner_
HomePage_Banner_

ಕಾರುಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ  

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಕ್ಕಿಂಜೆ : ಇಲ್ಲಿಯ ಕಾರುಣ್ಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮವು ಜರುಗಿತು.
ಭಾರತ ಕಬಡ್ಡಿ ತಂಡದ ಮಾಜಿ ಆಟಗಾರ, ಏಕಲವ್ಯ ಪ್ರಶಸ್ತಿ ವಿಜೇತ, ಏಷ್ಯನ್ ಗೇಮ್ಸ್ ಪದಕ ವಿಜೇತ  ಉದಯ ಚೌಟರವರು ಕಾರ್ಯಕ್ರಮವನ್ನು  ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಟ್ರಸ್ಟ್ ನ ಸಂಚಾಲಕ  ಮಹಮ್ಮದ್.ಕೆ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಕರಾವಳಿ ಪ್ರಾಧಿಕಾರದ ಸದಸ್ಯ ರಾಜಶೇಖರ ಶೆಟ್ಟಿ ಭಂಡಾರಿಗುಡ್ಡೆ, ನೇತಾಜಿ ಕ್ರಿಕೇಟರ್ಸ್ ನಾಯಕ ಸತೀಶ್ ಬಂಗೇರ ಕುವೆಟ್ಟು, ಕ್ರೀಡಾರತ್ನ ಪ್ರಶಸ್ತಿ ವಿಜೇತ ದೈಹಿಕ ಶಿಕ್ಷಕ ಧರ್ಮೆಂದ್ರ ಗೌಡ, ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಪಿ.ಕೆ, ಸದಸ್ಯೆ ಶಾಂಭ, ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಡಿ.ಎ ರೆಹಮಾನ್, ಶಾಲಾ ನಾಯಕ ಇಬ್ರಾಹಿಂ ಫರ್ವೀಝ್, ಶಿಕ್ಷಕ ಮಧು ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಚಂದ್ರಪ್ಪ ಸ್ವಾಗತಿಸಿ, ದೈಹಿಕ ಶಿಕ್ಷಕ ಮಹೇಶ್ ಶೆಟ್ಟಿ ವಂದಿಸಿ, ಶಿಕ್ಷಕಿ ರೇವತಿ ದಿನೇಶ್ ಆಚಾರ್ಯ ಕಾರ್ಯಕ್ರಮ  ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.