ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಕಾವ್ಯಾ

ಬೆಳ್ತಂಗಡಿ:  ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನ.18 ರಂದು ನಡೆದಿದೆ. ಪುಂಜಾಲಕಟ್ಟೆ ಸರ್ಕಾರಿ ಪದವಿ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಹಾಗೂ ಬೆಳ್ತಂಗಡಿ ಹುಣ್ಸೆಕಟ್ಟೆ ನಿವಾಸಿ ಕೇಶವ ಪೂಜಾರಿಯವರ ಪುತ್ರಿ ಕಾವ್ಯಾ(18.ವ) ಮೃತಪಟ್ಟ ದುರ್ದೈವಿ.

ಕಾವ್ಯಾ ರವರು  ನ.13 ರಂದು ಕಾಲೇಜಿನಲ್ಲಿ ಪರೀಕ್ಷೆ ಬರೆಯುತ್ತಿರುವ  ವೇಳೆ  ನಕಲು ಮಾಡುತ್ತಿರುವ ಸಂದರ್ಭದಲ್ಲಿ ತಪಾಸಣಾ ತಂಡಕ್ಕೆ ಸಿಕ್ಕಿ ಬಿದ್ದಿದ್ದರು. ಇದರಿಂದ ಮನನೊಂದು ಮನೆಗೆ ಬಂದ ಆಕೆ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಸಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಈ ಸಂಬಂಧ  ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.