ನ.25: ಮಂಗಳೂರು ಕೇಂದ್ರ ಮೈದಾನದಲ್ಲಿ ಬೃಹತ್ ಜನಾಗ್ರಹ ಸಭೆ

ಬೆಳ್ತಂಗಡಿ: ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣಕ್ಕೆ ಸಂಸತ್ತಿನಲ್ಲಿ ಮಸೂದೆ ತರಬೇಕೆಂದು ಆಗ್ರಹಿಸಿ ನ.25 ರಂದು ಮಂಗಳೂರು ಕೇಂದ್ರ ಮೈದಾನದಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದೆ ಎಂದು ಭಜರಂಗದಳ ಪುತ್ತೂರು ಜಿಲ್ಲಾ ಸಂಚಾಲಕ ಭಾಸ್ಕರ ಧರ್ಮಸ್ಥಳ ತಿಳಿಸಿದರು. ಅವರು ನ.21 ರಂದು ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ದೇಶದ ಬಹುಸಂಖ್ಯಾತ ಹಿಂದೂಗಳಿಗೆ ದಕ್ಕೆಯಾಗದಂತೆ ಶ್ರೀರಾಮ ಜನ್ಮಸ್ಥಾನದಲ್ಲಿ ಮಂದಿರ ನಿರ್ಮಾಣವು ಕೋಟ್ಯಾಂತರ ಹಿಂದುಗಳ ಶ್ರದ್ದೆ, ನಂಬಿಕೆ, ಮಹದಾಸೆ, ಹೆಮ್ಮೆ ಹಾಗೂ ಸ್ವಾಭಿಮಾನದ ಪ್ರತೀಕಸವಾಗಿದ್ದು ಕೇಂದ್ರ ಸರಕಾರವು ಮಂದಿರ ನಿರ್ಮಾಣಕ್ಕೆ ಸಂಸತ್ತಿನಲ್ಲಿ ಮಸೂದೆ ತರಬೇಕೆಂದು ಈ ಜನಾಗ್ರಹ ಸಭೆ ನಡೆಯಲಿದ್ದು ಪುತ್ತೂರು ಜಿಲ್ಲೆಯಿಂದ 30 ಸಾವಿರಕ್ಕೂ ಮಿಕ್ಕಿ ಜನರು ಹಾಗೂ ತಾಲೂಕಿನಿಂದ 6 ಸಾವಿರ ಜನರು ಭಾಗವಹಿಸುವ ನಿರೀಕ್ಷೆ ಇದೆ. ಮುಂದಕ್ಕೆ ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಬೃಹತ್ ಜನಾಗ್ರಹ ಸಭೆ ನಡೆಯಲಿದ್ದು ದೇಶದಾದ್ಯಂತ 4 ಕಡೆ ಬೃಹತ್ ಸಭೆ ಜರಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಶ್ವಹಿಂದೂ ಪರಿಷತ್ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಅಗರ್ತ, ತಾಲೂಕು ಸಂಚಾಲಕ ಸಂತೋಷ್ ಅತ್ತಾಜೆ, ತಾಲೂಕು ಕಾರ್ಯದರ್ಶಿ ನವೀನ್ ನೆರಿಯ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.