ಸರ್ಕಾರಿ ನೌಕರರ ಸಂಘ ಬೆಳ್ತಂಗಡಿ ವತಿಯಿಂದ ಜಯಕೀರ್ತಿ ಜೈನ್ ರಿಗೆ ಅಭಿನಂದನೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಇತ್ತೀಚೆಗೆ ಚೆನ್ನೈನ ಭಾರತೀಯ ವಿದ್ಯಾಭವನದಲ್ಲಿ ನಡೆದ ಘಟಿಕೋತ್ಸವದಲ್ಲಿ ನ್ಯಾಷನಲ್ ವರ್ಚುವಲ್ ಯುನಿವರ್ಸಿಟಿ ಫಾರ್‌ಪೀಸ್‌ಆಂಡ್ ಎಜುಕೇಷನ್ ಅಕಾಡೆಮಿ ವತಿಯಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಪಡೆದ ಸರಕಾರಿ ನೌಕರರ ವಿವಿಧೋದ್ಧೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ಅಧ್ಯಕ್ಷ ಕೆ.ಜಯಕೀರ್ತಿ ಜೈನ್ ರವರಿಗೆ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ವತಿಯಿಂದ ನ.22 ರಂದು ಅಭಿನಂದನಾ ಕಾರ್ಯಕ್ರಮ ಜರುಗಿತು.
ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಸರಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಸಿ.ಆರ್ ನರೇಂದ್ರ, ಉಪಾಧ್ಯಕ್ಷ ಚಿದಾನಂದ ಹೂಗಾರ್, ಸರಕಾರಿ ನೌಕರರ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲಾ, ಉಪಾಧ್ಯಕ್ಷ ಆನಂದ.ಡಿ, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಕೋಶಾಧಿಕಾರಿ ಸಿದ್ಧೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.