ವಿದ್ಯಾರ್ಥಿ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Advt_NewsUnder_1
Advt_NewsUnder_1

ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಸಿಬಿಎಸ್‌ಇ ಹಾಗೂ ಐಸಿಎಸ್‌ಇಯವರು ನಡೆಸುವ 2018 ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ಪ್ರಥಮ ಬಾರಿಗೆ ಶೇ 60ರಿಂದ ಶೇ 74.99 ಹಾಗೂ ಶೇ 75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಕ್ರಮವಾಗಿ ರೂ.7 ಸಾವಿರ ಮತ್ತು ರೂ.15 ಸಾವಿರ ಪ್ರೋತ್ಸಾಹಧನವಿದ್ದು, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ವೆಬ್‌ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಿ, ಆನ್‌ಲೈನ್ ಅರ್ಜಿಯೊಂದಿಗೆ ಪೂರಕ ದಾಖಲೆಗಳನ್ನು ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಇಲ್ಲಿಗೆ ಡಿ.15 ರ ಒಳಗೆ ಸಲ್ಲಿಸುವಂತೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.