ರುಡ್‌ಸೆಟ್‌ನಲ್ಲಿ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭ

ಉಜಿರೆ: ರುಡ್‌ಸೆಟ್‌ನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಕಾರ್ಯಕ್ರಮ ಮತ್ತು ಕಂಪ್ಯೂಟರ್ ಡಿ.ಟಿ.ಪಿ ತರಬೇತಿ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ನಡೆಯಿತು. ಈ ಕಾರ್ಯಕ್ರಮದಲ್ಲಿ ವಿನಾಯಕ ರೈಸ್ ಮಿಲ್‌ನ ಮಾಲಕರಾದ ರೊ. ಶ್ರೀಕಾಂತ್ ಕಾಮತ್  ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ತಮ್ಮ ಉದ್ಯಮದಲ್ಲಿ ಎದುರಿಸಿದ ಸವಾಲುಗಳನ್ನು ವಿವರಿಸಿದರು.

ನಿರ್ದೇಶಕ ವಿನಯ್ ಕುಮಾರ್ ರವರು ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತವಿಕವಾಗಿ ಮಾತನಾಡಿದರು, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಅನಸೂಯ ವಂದಿಸಿದರು. ಈ ತರಬೇತಿ ಕಾರ್ಯಕ್ರಮದಲ್ಲಿ 29 ಪಿಎಮ್‌ಇಜಿಪಿ ಶಿಭಿರಾರ್ಥಿಗಳು ಮತ್ತು 30 ಡಿಟಿಪಿ ಶಿಭಿರಾರ್ಥಿಗಳು  ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.