ಧರ್ಮಸ್ಥಳ: ಸ್ವಚ್ಛತಾ ಜಾಗೃತಿ ಅಭಿಯಾನದ ಸಮಾರೋಪ ಸಮಾರಂಭ

ಧರ್ಮಸ್ಥಳ:ಗ್ರಾಮ ಪಂಚಾಯತ್ ಧರ್ಮಸ್ಥಳ , ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಸ್ವಚ್ಛತಾ ಜಾಗೃತಿ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಸ್ವಚ್ಛತಾ ಜಾಗೃತಿ ಅಭಿಯಾನದ ಸಮಾರೋಪ ಸಮಾರಂಭವು ನ.24 ರಂದು ಧರ್ಮಸ್ಥಳ ಅಮೃತವರ್ಷಿನಿ ಸಭಾಭವನದಲ್ಲಿ ಜರುಗಿತು.

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರು ಸಮಾರಂಭವನ್ನು ಉದ್ದೇಶಿಸಿ ಮಾತನಾಡಿ, ಮನ, ವಚನ ಹಾಗೂ ಕ್ರಿಯೆಯಲ್ಲಿ ನಾವು ಸ್ವಚ್ಛತೆ ಕಾಪಾಡುವ ಬಗ್ಗೆ ಕಾಳಜಿ ವಹಿಸಬೇಕು. ಸ್ವಚ್ಛತೆ ಸಭೆ, ಸಮಾರಂಭ ಮತ್ತು ಅಭಿಯಾನಕ್ಕೆ ಸೀಮಿತವಾಗದೆ ನಿತ್ಯವೂ ನಮ್ಮ ಉಸಿರಾಗಬೇಕು. ಸ್ವಚ್ಛತೆ ನಮ್ಮ ಸಂಸ್ಕೃತಿಯಾಗಬೇಕು . ದೇವರು ನಮಗೆ ಉಚಿತವಾಗಿ ನೀಡಿದ ಪರಿಶುದ್ಧ ನೀರು ಗಾಳಿ, ಬೆಳಕು, ಪ್ರಕೃತಿ ಹಾಗೂ ಭೂಮಿಯನ್ನು ಸುಸ್ಥಿತಿಯಲ್ಲಿಡುವುದು ನಮ್ಮ ಹೊಣೆಗಾರಿಕೆಯಾಗಿದೆ. ಇಂದಿನ ಮಕ್ಕಳೇ ಮುಂದಿನ ಜನಾಂಗ. ಅವರ ಆರೋಗ್ಯ ಪೂರ್ಣ ಹಾಗೂ ಶಾಂತಿ, ನೆಮ್ಮದಿಯ ಜೀವನಕ್ಕಾಗಿ ಪರಿಶುದ್ಧ, ಸ್ವಚ್ಛ ಪರಿಸರವನ್ನು ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಶಾಲೆಗಳಲ್ಲಿ ಮಕ್ಕಳಿಗೆ ಸ್ವಚ್ಛತೆ ಬಗ್ಯೆ ಜಾಗೃತಿ ಮೂಡಿಸಬೇಕು ಎಂದು  ಸಲಹೆ ನೀಡಿದರು.

ಉಜಿರೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ| ಯಶೋವರ್ಮ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಹಣಕಾಸು ವಿಭಾಗದ ಕಾರ್ಯದರ್ಶಿ ಶಾಂತರಾಮ ಪೈ, ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷೆ ಜಯಂತಿ, ಗ್ರಾ.ಪಂ ಸದಸ್ಯರಾದ ಶ್ರೀನಿವಾಸ ರಾವ್, ಶೀಲಾವತಿ, ನಳಿನಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಉಮೆಶ್, ಕಾರ್ಯದರ್ಶಿ ವಿಶ್ವನಾಥ, ನಿರ್ದೇಶಕ ಲಕ್ಷ್ಮಣ ಎಂ, ಯೋಜನಾಧಿಕಾರಿ ಪ್ರವೀಣ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.