ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜಯೇಂದ್ರ ಯಡಿಯೂರಪ್ಪ ನವರು ಇಂದು(ನ.26) ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಶಾಸಕ ಹರೀಶ್ ಪೂಂಜ ಅವರನ್ನು ಸ್ವಾಗತಿಸಿ, ಆದರದಿಂದ ಬರಮಾಡಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ ಸುವರ್ಣ, ಬಿಜೆಪಿ ನ.ಪಂ ಸದಸ್ಯರಾದ ಜಯಾನಂದ ಗೌಡ, ಮುಖಂಡರುಗಳಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಸದಾನಂದ ಉಂಗಿಲಬೈಲು, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್, ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ವಸಂತ ಮಜಲು, ರಾಜೇಶ್ ಶೆಟ್ಟಿ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.