ಧರ್ಮಸ್ಥಳ: ವೀರೇಂದ್ರ ಹೆಗ್ಗಡೆಯವರ 70ನೇ ಜನ್ಮದಿನ ಆಚರಣೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ  ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ 70 ನೆ ಜನ್ಮ ದಿನವನ್ನು ಸರಳವಾಗಿ ಆಚರಿಸಲಾಯಿತು. ಹೆಗ್ಗಡೆಯವರ ಬಂಧುಗಳು, ಆಪ್ತರು, ಅಭಿಮಾನಿಗಳು ಹಾಗೂ ಭಕ್ತರು ಶ್ರದ್ಧಾ-ಭಕ್ತಿ ಪೂರ್ವಕ ನಮನಗಳೊಂದಿಗೆ ಶುಭಾಶಯ ಅರ್ಪಿಸಿದರು.
ಶಾಸಕ ಹರೀಶ್ ಪೂಂಜ, ಕೆ. ಪ್ರತಾಪಸಿಂಹ ನಾಯಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮಹಾ ಪ್ರಬಂಧಕ ಇಂದು ಶೇಖರ್, ಕಾರ್ಕಳ ಸಾಹಿತ್ಯ ಸಂಘದ ಸಂಚಾಲಕ ಪ್ರೊ| ಎಂ. ರಾಮಚಂದ್ರ, ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಸ್ವಾತಂತ್ರ್ಯ ಹೋರಾಟಗಾರ ಪಡಂಗಡಿ ಭೋಜರಾಜ ಹೆಗ್ಡೆ, ಬಿಳಿಯೂರು ಧನ್ಯಕುಮಾರ್ ರೈ ಮೊದಲಾದ ಗಣ್ಯರು ಹಾಗೂ ಭಕ್ತರು ಬಂದು ಹೆಗ್ಗಡೆಯವರಿಗೆ ಗೌರವ ಪೂರ್ವಕ ಶುಭಾಶಯ ಸಲ್ಲಿಸಿದರು.
ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನ ಕಾಲೇಜಿನಲ್ಲಿ ಕಲಿಯುತ್ತಿರುವ ವಿವಿಧ ರಾಜ್ಯಗಳ ವಿದ್ಯಾರ್ಥಿಗಳು ಹೆಗ್ಗಡೆಯವರಿಗೆ ಭಕ್ತಿಪೂರ್ವಕ ಗೌರವ ಸಲ್ಲಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.