ಬೆಳ್ತಂಗಡಿ: ಸಾಧಕರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಶ್ರಯದಲ್ಲಿ ವಿವಿಧ ಸಹಕಾರಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಇತ್ತೀಚೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ನಡೆದ 65 ನೇ ಅಖಿಲ ಭಾರತ ಸಹಕಾರ ಸಪ್ತಾಹದಲ್ಲಿ ಬೆಳ್ತಂಗಡಿ ಸಹಕಾರಿ ಸಂಘದ ಸ್ಥಾಪಕ ಸ್ಥಾಪಕ ಕುಟುಂಬದ ಹಿರಿಯ ಪ್ರತಿನಿಧಿ ಯೋಗೀಶ್ ಭಿಡೆ, ಸಂಘದ ನಿರ್ದೇಶಕ ಹಾಗೂ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಎನ್.ಜೆ ಕಡಂಬ, ಸುಮುಖ ನವೋದಯ ಸ್ವಸಹಾಯ ಗುಂಪಿನ ಸದಸ್ಯ ಹಾಗೂ ನವೋದಯ ಗುಂಪಿನ ಹಿರಿಯ ಸದಸ್ಯ ಸದಾನಂದ ಶೆಟ್ಟಿ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕೇಂದ್ರ ಬ್ಯಾಂಕಿನ ಅಧ್ಯಕ್ಷ ಎಂ.ಎನ್ ರಾಜೇಂದ್ರ ಕುಮಾರ್, ಜಿಲ್ಲಾ ಯೂನಿಯನ್ ಅಧ್ಯಕ್ಷ ಹರೀಶ್ ಆಚಾರ್, ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ, ಸಹಕಾರಿ ಉಪನಿಬಂಧಕ ಬಿ.ಕೆ ಸಲೀಂ, ಬೆಳ್ತಂಗಡಿ ಸಹಕಾರಿ ಸಂಘದ ಅಧ್ಯಕ್ಷ ಮುನಿರಾಜ ಅಜ್ರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸಾದ್ ಎಸ್, ಪ್ರಭಾಕರ ಬಂಗೇರ, ಕೇಂದ್ರ ಬ್ಯಾಂಕಿನ ನಿರ್ದೇಶಕ ನಿರಂಜನ್, ಪದ್ಮನಾಭ ಅರ್ಕಜೆ, ಭೂ ಅಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಪ್ರವೀಣ್ಚಂದ್ರ ಜೈನ್, ಇಚ್ಚಿಲ ಸುಂದರ ಗೌಡ, ಸುಜೀತಾ ವಿ. ಬಂಗೇರ, ಪುಷ್ಪರಾಜ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.