ಗೇರುಕಟ್ಟೆ ಪದವಿ ಪೂರ್ವ ಕಾಲೇಜು: ದಶಮಾನೋತ್ಸವ ಸಂಭ್ರಮಾಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ: ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಗೇರುಕಟ್ಟೆ ಇದರ ದಶಮಾನೋತ್ಸವ ಸಂಭ್ರಮಾಚರಣೆ ಹಾಗೂ ನೂತನ ತರಗತಿ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮವು ಡಿ.8 ರಂದು ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಕಳಿಯ ಕ್ಷೇತ್ರದ ತಾ.ಪಂ ಸದಸ್ಯ ಪ್ರವೀಣ್ ಜಿ. ಗೌಡ, ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಭಾರ ಉಪನಿರ್ದೇಶಕಿ ಎಲ್ವೀರಾ ಫಿಲೋಮಿನಾ, ಗ್ರಾ.ಪಂ ಸದಸ್ಯರಾದ ದಿವಾಕರ ಮೆದಿನ, ಶ್ರೀಮತಿ ನಳಿನಿ, ಶ್ರೀಮತಿ ಪ್ರೇಮಾ, ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ದಶಮಾನೋತ್ಸವ ಸಮಿತಿ ಅಧ್ಯಕ್ಷ ತುಕಾರಾಮ ಪೂಜಾರಿ, ಉಪಾಧ್ಯಕ್ಷ ರತ್ನಾಕರ ಪೂಜಾರಿ ಬಳ್ಳಿದಡ್ಡ, ಕಾರ್ಯಾಧ್ಯಕ್ಷ ಕೆ.ಎಂ ಅಬ್ದುಲ್ ಕರಿಂ, ಕೋಶಾಧಿಕಾರಿ ಮೋಹನ್ ಭಟ್, ಪ್ರಾಂಶುಪಾಲರಾದ ಪೂರ್ಣಿಮಾ ಬಿ.ಕೆ, ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಕೆ.ಜಿ ಲಕ್ಷ್ಮಣ ಶೆಟ್ಟಿ, ಕಾಲೇಜು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಕೆ.ಎಸ್. ಹರಿಪ್ರಸಾದ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.