ಕಳಿಯ ಮತ್ತು ನ್ಯಾಯತರ್ಪು ಫಲಾನುಭವಿಗಳಿಗ ಉಚಿತ ಗ್ಯಾಸ್ ವಿತರಣೆ

ಗೇರುಕಟ್ಟೆ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಕಳಿಯ ಮತ್ತು ನ್ಯಾಯತರ್ಪು ಗ್ರಾಮದ 110 ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮವು ಡಿ.7 ರಂದು ಜರುಗಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶಾಸಕ ಹರೀಶ್ ಪೂಂಜ ಫಲಾನುಭವಿಗಳಿಗೆ ಗ್ಯಾಸ್ ವಿತರಿಸಿ ಮಾತನಾಡಿ, ತನ್ನ ಶಾಸಕತ್ವದ 200 ದಿನಗಳಲ್ಲಿ 102 ಕೊಟಿ ರೂ. ಅನುದಾನವನ್ನು ತಾಲೂಕಿನ ಅಭಿವೃದ್ಧಿಗೆ ನೀಡುವ ಮೂಲಕ ನವ ಬೆಳ್ತಂಗಡಿ ನಿರ್ಮಾಣಕ್ಕೆ ಬದ್ಧನಾಗಿದ್ದೇನೆ ಎಂದರು.
ಬಿಜೆಪಿ ಕಳಿಯ ಪಂಚಾಯತಿ ಸಮಿತಿ ಅಧ್ಯಕ್ಷ ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬಿ.ಎಸ್, ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು, ಬಿಜೆಪಿ ಕಳಿಯ ಪಂಚಾಯತಿ ಸಮಿತಿ ಕಾರ್ಯದರ್ಶಿ ಶೇಖರ್ ನಾಯ್ಕ, ಗ್ರಾ.ಪಂ ಸದಸ್ಯರಾದ ದಿವಾಕರ ಎಂ., ಸುಧಾಕರ ಮಜಲು, ವಿಜಯ ಪ್ರಸಾದ್, ನಳಿನಿ ಶೆಟ್ಟಿ, ಗೇರುಕಟ್ಟೆ ಮಿಲ್ಕ್ ಸೊಸೈಟಿ ಅಧ್ಯಕ್ಷ ಜನಾರ್ದನ ಗೌಡ ಉಪಸ್ಥಿತರಿದ್ದರು. ಬಿಜೆಪಿ ಕಳಿಯ ಶಕ್ತಿ ಕೇಂದ್ರ ಪ್ರಮುಖ್ ರಾಜೇಶ್ ಪೆಂರ್ಬುಡ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.