ಹೈಜಂಪ್ ಸ್ಪರ್ಧೆ: ಅರುಣ್ ಕೆ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಮಾಸ್ಟರ್ ಆಥ್ಲೇಟಿಕ್ಸ್ ಸಂಸ್ಥೆ ಮಂಗಳೂರು ಇದರ ವತಿಯಿಂದ ಡಿ.8ಮತ್ತು ಡಿ.9ರಂದು ಶಿವಮೊಗ್ಗದಲ್ಲಿ ನಡೆದ 38ನೇ ರಾಜ್ಯ ಮಟ್ಟದ ಮಾಸ್ಟರ್ ಆಥ್ಲೇಟಿಕ್ ಚಾಂಪಿಯಾನ್‌ಶಿಫ್‌ನ ಹೈಜಂಪ್ ಸ್ಪರ್ಧೆಯಲ್ಲಿ ಅರುಣ್ ಕೆ. ಬೆಳ್ತಂಗಡಿ ಪ್ರಥಮ ಸ್ಥಾನವನ್ನು ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಮಾಸ್ಟರ್ ಆಥ್ಲೇಟಿಕ್ಸ್ ಚಾಂಪಿಯನ್‌ಶಿಫ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಇವರು ಬೆಳ್ತಂಗಡಿ ಸುದೇಮುಗೇರು ಬಾಬು ಮತ್ತು ಮೀನಾಕ್ಷಿ ದಂಪತಿಗಳ ಪುತ್ರ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.