ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಶಿಕ್ಷಣ ರ್‍ಯಾಂಕ್ ಉದ್ಯೋಗ ಗಳಿಕೆಗಲ್ಲ. ಮನುಷ್ಯರಾಗಿ ಬದುಕುವುದಕ್ಕೆ ಶಿಕ್ಷಣ ಬೇಕು. ಮನುಷ್ಯತ್ವವನ್ನು ಗುರುತಿಸುವುದಕ್ಕಾಗಿ ಎಲ್ಲರ ಜೊತೆ ಸೇರಿ ಸಮಾಜವನ್ನು ಕಟ್ಟುವುದಕ್ಕಾಗಿ ಶಿಕ್ಷಣ ಬಳಕೆಯಾಗಬೇಕು ಎಂದು ಮಂಗಳೂರಿನ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಗಣೇಶ್ ಅಮೀನ್ ಸಂಕಮಾರ್ ಹೇಳಿದರು.
ಅವರು ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ವಿದ್ಯಾರ್ಥಿಯೋರ್ವನು ಉನ್ನತ ಶಿಕ್ಷಣವನ್ನು ಎಷ್ಟು ಬೇಕಾದರೂ ಪಡೆಯಬಹುದು. ಆದರೆ ಅವನು ತನ್ನ ತಂದೆ, ತಾಯಿ, ಕುಟುಂಬದವರೊಡನೆ ಒಳ್ಳೆಯ ಬಾಂಧವ್ಯ ಇಟ್ಟುಕೊಳ್ಳಲು ಸಾಧ್ಯವಾಗದಿದ್ದರೆ, ಆತ ಕಲಿತ ಶಿಕ್ಷಣಕ್ಕೆ ಅರ್ಥವಿಲ್ಲ. ಹಣಗಳಿಕೆಗಾಗಿ ಕಲಿಯುವಂತಾಗಬಾರದು. ಬದುಕನ್ನು ರೂಪಿಸುವ ಶಿಕ್ಷಣವನ್ನು ಪಡೆಯುವಂತಾಗಬೇಕು ಎಂದು ಅವರು ಹೇಳಿದರು.
ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕ ವಂ| ಫಾ| ಬೇಸಿಲ್ ವಾಸ್ ಅಧ್ಯಕ್ಷತೆ ವಹಿಸಿದ್ದರು. ಶಿರ್ವ ಸೈಂಟ್ ಮೇರೀಸ್ ಪಿ.ಯು ಕಾಲೇಜು ಪ್ರಾಂಶುಪಾಲೆ ಐರಿನ್ ಮೆಂಡೊನ್ಸಾ , ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ರೊನಾಲ್ಡ್ ಸಿಕ್ವೇರಾ ಮುಖ್ಯ ಅಭ್ಯಾಂಗತರಾಗಿದ್ದರು. ಪ್ರೌಢಶಾಲಾ ಹಾಗೂ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ಬಾಲಕೃಷ್ಣ , ಫಿಲಿಪ್ ಡಿಕುನ್ಹಾ , ಪಾಲನಾ ಮಂಡಳಿಯ ಕಾರ್ಯದರ್ಶಿ ಲಿಯೋ ರೊಡ್ರಿಗಸ್ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲ ವಂ.ಫಾ| ಜೆರೋಮ್ ಡಿಸೋಜ ವಾರ್ಷಿಕ ವರದಿ ಮಂಡಿಸಿದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಮೋಹನ್ ನಾಯಕ್ ಸ್ವಾಗತಿಸಿ, ಉಪನ್ಯಾಸಕ ವಿನ್ಸೆಂಟ್ ರೊಡ್ರಿಗಸ್, ರೆನಿಶಾ ವೇಗಸ್ ಕಾರ್ಯಕ್ರಮ ನಿರೂಪಿಸಿ, ಲಿಯೋ ನರೊನ್ಹಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.