ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜು ವಾರ್ಷಿಕ ಕ್ರೀಡಾಕೂಟ

Advt_NewsUnder_1
Advt_NewsUnder_1

ಬೆಳ್ತಂಗಡಿ : ಕ್ರೀಡೆಯಿಂದ ಶಿಸ್ತು ಮತ್ತು ಗುಣಮಟ್ಟದ ಬದುಕು ನಿರ್ಮಾಣವಾಗುತ್ತದೆ. ವಿದ್ಯಾರ್ಥಿ ಬದುಕಲ್ಲಿ ಸಿಗುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡ ವಿದ್ಯಾರ್ಥಿ ಬದುಕಿನಲ್ಲಿ ಸಾಧಕನಾಗಲು ಸಾಧ್ಯ ಎಂದು ಮಾಜಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಅವರು ಬೆಳ್ತಂಗಡಿ ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಪೀತಾಂಬರ ಹೇರಾಜೆ ಮಾತನಾಡಿ, ಕ್ರೀಡಾಕೂಟ ವಿದ್ಯಾರ್ಥಿ ಬದುಕಿನಲ್ಲಿ ಅವಕಾಶಗಳ ಹೆಬ್ಬಾಗಿಲು ಇದ್ದಂತೆ. ಶಿಕ್ಷಣ ಹಂತದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ವಿದ್ಯಾರ್ಥಿ ಅದೇ ಅಭಿರುಚಿಯ ಮೂಲಕ ಬೆಳಗಲು ಸಾಧ್ಯವಾಗುತ್ತದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಎ ಕೃಷ್ಣಪ್ಪ ಪೂಜಾರಿ ಸ್ವಾಗತಿಸಿದರು. ಕ್ರೀಡಾ ಸಂಯೋಜಕರಾದ ಹರೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಮಲ್ಲಿಕಾ ಟಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.