ಎಬಿವಿಪಿ ವತಿಯಿಂದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನೆ

ಬೆಳ್ತಂಗಡಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ.ಪೂ ಶಿಕ್ಷಣ ಇಲಾಖೆಗೆ ನಿರ್ದೇಶಕರ ನೇಮಕ , ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರ ನೇಮಕಾತಿ, ಪ್ರಶ್ನೆ ಪತ್ರಿಕಾ ಹಗರಣದ ಪ್ರಮುಖ ಆರೋಪಿ ಶಿವಕುಮಾರ್ ರಿಗೆ ಶಿಕ್ಷೆ ಮೊದಲಾದ ಬೇಡಿಕೆಯನ್ನು ಆಗ್ರಹಿಸಿ ರಾಜ್ಯ ಸರಕಾರದ ವಿರುದ್ಧ ಡಿ.15 ರಂದು ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಯಿತು.
ಪಿ.ಯು ಬೋರ್ಡ್‌ಗೆ ನಿರ್ದೇಶಕರಿಲ್ಲದೆ ಮತ್ತು ರಾಜ್ಯ ಸರ್ಕಾರದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರನ್ನು ನೇಮಕ ಮಾಡದೇ ಇರುವುದರಿಂದ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತಿದೆ. ಶಾಲಾ ಪರೀಕ್ಷೆಗಳು ಆರಂಭವಾಗುವ ಮೊದಲು ಈ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕು ಸಂಚಾಲಕ ಅಜೇಯ್ ಪ್ರಭು, ಸಹ ಸಂಚಾಲಕ ನಾಗೇಶ್ ಗೌಡ, ಬೆಳ್ತಂಗಡಿ ನಗರ ಕಾಯದರ್ಶಿ ಭಗತ್, ರಾಜ್ಯ ಕಾರ್ಯಕಾರಣಿ ಸದಸ್ಯ ದೀಕ್ಷಿತ್ ದಿಡುಪೆ, ಉಜಿರೆ ನಗರ ಕಾರ್ಯದರ್ಶಿ ವಿಘ್ನೇಶ್, ವಿದ್ಯಾರ್ಥಿನಿ ಪ್ರತಿನಿಧಿ ಭಾರತಿ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.