HomePage_Banner_
HomePage_Banner_
HomePage_Banner_

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಶಿಕ್ಷಕನಿಗೆ ನ್ಯಾಯಾಂಗ ಬಂಧನ

ಪೆರಾಡಿ: ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿ, ಗಣಿತ ಶಿಕ್ಷಕ ಪೆರಾಡಿಯ ಪ್ರಸಾದ್ ಕೋಟ್ಯಾನ್ ಎಂಬವರಿಗೆ ಕುಂದಾಪುರ ಜಿಲ್ಲಾ ವಿಶೇಷ ನ್ಯಾಯಾಲಯವರು ನ್ಯಾಯಾಂಗ ಬಂಧನ ವಿಧಿಸಿದೆ.
ಕಾರ್ಕಳದ ಹೊಸ್ಮಾರು ಸಮೀಪದ ಖಾಸಗಿ ಶಾಲೆಯೊಂದರಲ್ಲಿ ಗಣಿತ ಶಿಕ್ಷಕರಾಗಿರುವ ಪ್ರಸಾದ್ ಕೋಟ್ಯಾನ್ ರವರು ವಿದ್ಯಾರ್ಥಿನಿಯೋರ್ವಳ ಜೊತೆ ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ ದೃಶ್ಯವು ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡುತ್ತಿತ್ತು.
ಈ ಸಂಬಂಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ಹಾಲಾಮೂರ್ತಿ ನೇತೃತ್ವದಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಸಾದ್ ಕೋಟ್ಯಾನ್‌ರವರನ್ನು ಕುಂದಾಪುರ ಜಿಲ್ಲಾ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಇವರಿಗೆ ಡಿ.27 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.