ಚಲನಚಿತ್ರ ನಟ ಯಶ್ ಧರ್ಮಸ್ಥಳ, ಸುರ್ಯ ಕ್ಷೇತ್ರಕ್ಕೆ ಭೇಟಿ

Advt_NewsUnder_1
Advt_NewsUnder_1

ಧರ್ಮಸ್ಥಳ: ಕನ್ನಡ ಚಿತ್ರರಂಗದ ಹೆಸರಾಂತ ನಟ ರಾಕಿಂಗ್‌ಸ್ಟಾರ್ ಯಶ್ ರವರು ಡಿ.16 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು. ನಂತರ ಕ್ಷೇತ್ರದ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆದರು.
ಈ ಸಂದರ್ಭ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವೀರೂ ಶೆಟ್ಟಿ, ದೇವಳದ ಕಛೇರಿ ಪ್ರಬಂಧಕ ಪಾರ್ಶ್ವನಾಥ್ ಜೈನ್, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಉಪಸ್ಥಿತರಿದ್ದರು.
ಅಲ್ಲಿಂದ ಮಣ್ಣಿನ ಹರಕೆಗಳಿಗೆ ಹೆಸರುವಾಸಿಯಾಗಿರುವ ಧಾರ್ಮಿಕ ಕ್ಷೇತ್ರ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಟ್ರಸ್ಟಿ ಪ್ರೊ| ಸತೀಶ್ಚಂದ್ರ ಸುರ್ಯಗುತ್ತು, ಅರ್ಚಕ ಅನಂತ್ರಾಮ ಮಯ್ಯ, ಪ್ರಕಾಶ್, ಪ್ರಸಾದ್, ಮುನಿರಾಜ ಅಜ್ರಿ, ಶ್ರೀಧರ ರಾವ್, ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.