ಶ್ರೀ ಗುರುದೇವ ಪದವಿ ಪೂರ್ವಕಾಲೇಜು ವಾರ್ಷಿಕ ಸಮಾರಂಭ

ಬೆಳ್ತಂಗಡಿ: ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಬೆಳ್ತಂಗಡಿ ಇದರ ಆಡಳಿತಕ್ಕೊಳಪಟ್ಟ ಶ್ರೀ ಗುರುದೇವ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ವಾರ್ಷಿಕ ಸಮಾರಂಭವು ಇಂದು (ಡಿ.18) ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದ ಸಭಾಭವನದಲ್ಲಿ ಜರುಗಿತು.
ಮಾಜಿ ಶಾಸಕ ಕೆ. ವಸಂತ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗುರುವಾಯನಕೆರೆ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಜಗನ್ನಾಥ್, ನಾವೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ರಮೇಶ್, ನಗರ ಪಂಚಾಯತ್ ಸದಸ್ಯ ಜನಾರ್ದನ ಉಪಸ್ಥಿತರಿದ್ದು, ಇವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ಸದಸ್ಯರಾದ ಪೀತಾಂಬರ ಹೇರಾಜೆ, ವಿದ್ಯಾರ್ಥಿ ನಾಯಕ ಲಿಖಿತ್ ಕುಮಾರ್, ಕಾರ್ಯದರ್ಶಿ ಸಹನಾ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಪ್ರತೀಕ್ಷಾ ಮತ್ತು ತಂಡ ಪ್ರಾರ್ಥಿಸಿ, ಕನ್ನಡ ಉಪನ್ಯಾಸಕ ಡಾ ಮೋಹನ ಗೌಡ ಸ್ವಾಗತಿಸಿದರು. ಪ್ರಾಂಶುಪಾಲರಾದ ಎ.ಕೃಷ್ಣಪ್ಪ ಪೂಜಾರಿ ವರದಿ ವಾಚಿಸಿ, ಉಪನ್ಯಾಸಕರುಗಳಾದ ಡಾ| ಸವಿತಾ ಮತ್ತು ಶ್ರೀಮತಿ ಮಾಯಾ ಭಟ್ ಅತಿಥಿಗಳನ್ನು ಪರಿಚಯಿಸಿದರು. ಉಪನ್ಯಾಸಕರುಗಳಾದ ವಿನಯಕುಮಾರ್ ಕೆ. ಮತ್ತು ಶ್ರೀಮತಿ ಲತಾ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿ, ಹರೀಶ್ ಪೂಜಾರಿ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.