ಡಿ. 23: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ರಕರ್ತರ ಗ್ರಾಮ ವಾಸ್ತವ್ಯ

ಬೆಳ್ತಂಗಡಿ: ದ.ಕ. ಜಿಲ್ಲಾಡಳಿತ ಮತ್ತು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಪ್ರಮುಖ ನೇತೃತ್ವದೊಂದಿಗೆ ಡಿ. 23 ರಂದು ತಾಲೂಕಿನ ತೀರಾ ಹಿಂದುಳಿದ ಅಭಿವೃದ್ಧಿ ಕುಂಠಿತ ಮತ್ತು ದೂರದ ಒಳನಾಡು ಪ್ರದೇಶವಾದ ನಾರಾವಿ ಗ್ರಾ.ಪಂ ವ್ಯಾಪ್ತಿಯ ಕುತ್ಲೂರು ಶಾಲೆಯಲ್ಲಿ ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮತ್ತು ಉಚಿತ ವೈದ್ಯಕೀಯ ಶಿಬಿರ ನಡೆಯಲಿದ್ದು, ಇದನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಗಳು ಎಲ್ಲಾ ಸರಕಾರಿ ಇಲಾಖೆಗಳು ಪೂರ್ಣ ಸನ್ನದ್ದರಾಗಬೇಕು ಎಂದು ಡಿಸಿ ಸಸಿಕಾಂತ್ ಸೆಂಥಿಲ್ ಸ್ಪಷ್ಟ ನಿರ್ದೇಶನ ನೀಡಿದರು.
ಪುತ್ತೂರು ಮಿನಿವಿಧಾನ ಸೌಧದಲ್ಲಿ ಜಿಲ್ಲಾಧಿಕಾರಿಗಳು ಕರೆದಿದ್ದ ವಿಭಾಗ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ, ಕಾರ್ಯಕ್ರಮ ಕರಪತ್ರ ಬಿಡುಗಡೆಗೊಳಿಸಿ ಅವರು ಈ ಸೂಚನೆ ನೀಡಿದರು.
ಸ್ವತಃ ಮುಖ್ಯಮಂತ್ರಿ ಎಚ್‌ಡಿಕೆ ಯವರು ಉದ್ಘಾಟನೆಗೊಳಿಸಿರುವ ಈ ವಿಶೇಷ ಯೋಜನೆಯಂತೆ ಡಿ. 23 ರ ರಂದು ವಾಸ್ತವ್ಯದ ಉದ್ಘಾಟನೆ ಸಾಂಕೇತಿಕವಾಗಿ ನಡೆಯಲಿದೆ. ಇದು ಮುಂದಕ್ಕೆ ರಾಜ್ಯಮಟ್ಟಕ್ಕೆ ವಿಸ್ತರಿಸುವ ಸಾಧ್ಯತೆ ಇದೆ. ನಕ್ಸಲ್ ಬಾದಿತ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯುವುದರಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆಯನ್ನು ಪೊಲೀಸರು ಮಾಡಬೇಕು. ವಿದ್ಯುತ್ ಸಮಸ್ಯೆ ಇರಬಾರದು. ನಾನು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪಾಲ್ಗೊಳ್ಳುತ್ತಿವೆ. ಸಂವಾದದಲ್ಲಿ ಗ್ರಾಮಸ್ಥರು ಸಲ್ಲಿಸುವ ಬೇಡಿಕೆಗಳನ್ನು ಸರಿಯಾಗಿ ಮನದಟ್ಟು ಮಾಡಿ ಉತ್ತರ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು. ಸಭೆಯಲ್ಲಿ ಪುತ್ತೂರು ಸಹಾಯಕ ಕಮಿಷನರ್ ಎಚ್.ಕೆ. ಕೃಷ್ಣಮೂರ್ತಿ, ಪುತ್ತೂರು ತಹಶೀಲ್ದಾರ್ ಅನಂತಶಂಕರ, ತಾ.ಪಂ ಇ.ಒ ಕುಸುಮಾಧರ್ ಮತ್ತು ಜಗದೀಶ್ ಎಸ್, ಬೆಳ್ತಂಗಡಿ ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ, ಪುತ್ತೂರು ನಗರ ಪೊಲೀಸ್ ಠಾಣೆಯ ಎಸ್.ಐ ಅಜೇಯ್ ಡಿ.ಎನ್, ಸಿಡಿಪಿಒ ಶಾಂತಿ ಹೆಗ್ಡೆ, ಪ್ರಿಯಾ ಆಗ್ನೇಸ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್, ತಾಲೂಕು ಆರೋಗ್ಯಾಧಿಕಾರಿ ಅಶೋಕ್ ರೈ ಮತ್ತು ಕಲಾಮಧು ಶೆಟ್ಟಿ, ಜಿ.ಪಂ ಎಇಇ ಚೆನ್ನಪ್ಪ ಮೊಲಿ, ಪಿಡಬ್ಲ್ಯುಡಿ ಇಇ ಶಿವಪ್ರಸಾದ್ ಅಜಿಲ ಸಹಿತ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿದ್ದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಭುವನೇಶ್ ಗೇರುಕಟ್ಟೆ, ತಾ| ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ್ ಬಳಂಜ, ಕಾರ್ಯದರ್ಶಿ ಶಿಬಿ ಧರ್ಮಸ್ಥಳ, ಕಾರ್ಯಕಾರಿ ಸಮಿತಿ ಸದಸ್ಯ ಆಚುಶ್ರೀ ಬಾಂಗೇರು, ಪುತ್ತೂರು ಪತ್ರಕರ್ತರ ಸಂಘದ ಸದಸ್ಯರಾದ ಬಿ.ಟಿ.ರಂಜನ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.