ಕುತ್ಲೂರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಕುತ್ಲೂರು: ದಕಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ, ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ ಹಾಗೂ ನಾರಾವಿ ಗ್ರಾ.ಪಂ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಡಿ.23 ರಂದು ಕುತ್ಲೂರು ಶಾಲಾ ವಠಾರದಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಬಿ.ಆರ್ ರವಿಕಾಂತೇ ಗೌಡ ನೆರವೇರಿಸಿದರು. ಎ.ಜೆ ಆಸ್ಪತ್ರೆಯಿಂದ ಆಯೋಜಿಸಲಾದ ಆರೋಗ್ಯ ತಪಾಸಣಾ ಶಿಬಿರವನ್ನು ದ.ಕ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಸೆಲ್ವಮಣಿ ಆರ್ ಉದ್ಘಾಟಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.
ಪುತ್ತೂರು ಸಹಾಯಕ ಕಮಿಷನರ್ ಡಾ| ಎಚ್.ಕೆ ಕೃಷ್ಣಮೂರ್ತಿ, ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋಣಾವಣೆ, ಗ್ರಾ.ಪಂ ಅಧ್ಯಕ್ಷ ರವೀಂದ್ರ ಪೂಜಾರಿ, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮನೋಹರ ಬಳಂಜ ಉಪಸ್ಥಿತರಿದ್ದರು.
ಸಂವಾದ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಭಾಗವಹಿಸಿದ್ದರು. ಜನಪ್ರತಿನಿಧಿಗಳೊಂದಿಗೆ ಗ್ರಾಮಸ್ಥರ ಸಂವಾದ ಕಾರ್ಯಕ್ರಮದಲ್ಲಿ ದ.ಕ ಜಿಲ್ಲಾ ಉಸ್ತುವಾರಿ ಹಾಗೂ ನಗರಾಭಿವೃದ್ಧಿ ಸಚಿವರಾದ ಯು.ಟಿ ಖಾದರ್, ಶಾಸಕ ಹರೀಶ್ ಪೂಂಜ, ಡಾ| ಕಲಾಮಧು ಶೆಟ್ಟಿ ಭಾಗವಹಿಸಿದ್ದರು. ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಸ್ವಾಗತಿಸಿ, ಪತ್ರಕರ್ತ ದೇವಿಪ್ರಸಾದ್ ವಂದಿಸಿ, ಅಶ್ರಫ್ ಆಲಿಕುಂಞಿ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.