ಕಣಿಯೂರು: ಉಜ್ವಲ ಯೋಜನೆಯಡಿ ಉಚಿತ ಗ್ಯಾಸ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಕಣಿಯೂರು: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮವು ಡಿ.24 ರಂದು ಕಣಿಯೂರು ಸರಕಾರಿ ಪ್ರೌಢಶಾಲೆ ಯಲ್ಲಿ ಜರುಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ವೇದಿಕೆಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೀತಾರಾಮ ಬೆಳಾಲು, ಕಣಿಯೂರು ಗ್ರಾ.ಪಂ ಅಧ್ಯಕ್ಷ ಸುನೀಲ್ ಸಾಲಿಯಾನ್, ಬಂದಾರು ಗ್ರಾ.ಪಂ ಅಧ್ಯಕ್ಷ ಉದಯ ಕುಮಾರ್, ತಾ.ಪಂ ಸದಸ್ಯರಾದ ಅಮಿತಾ ಕುಶಾಲಪ್ಪ ಗೌಡ, ಕೃಷ್ಣಯ್ಯ ಆಚಾರ್ಯ, ಶಕ್ತಿಕೇಂದ್ರದ ಅಧ್ಯಕ್ಷ ಗಣೇಶ್ ಪುತ್ತಿಲ, ದ.ಕ. ಬಿಜೆಪಿ ಉಪಾಧ್ಯಕ್ಷೆ ಶಾರದಾ ರೈ, ಪುರಂದರ ಶೆಟ್ಟಿ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಬಾಬುಗೌಡ ಮತ್ತಿತರರ ಗಣ್ಯರು, ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.