ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ಕೋಟಿ-ಚೆನ್ನಯ ಕ್ರೀಡಾಕೂಟ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಇದರ ಸಹಯೋಗದೊಂದಿಗೆ 9ನೇ ವರ್ಷದ ಕೋಟಿ-ಚೆನ್ನಯ ಕ್ರೀಡಾಕೂಟ ಡಿ.30 ರಂದು ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು.
ಕ್ರೀಡಾಕೂಟವನ್ನು ಬೆಂಗಳೂರಿನ ಉದ್ಯಮಿ ಹಾಗೂ ಶ್ರೀ ಗುರುದೇವ ಶಿಕ್ಷಣ ಸಂಸ್ಥೆಯ ಮ್ಯಾನೆಜಿಂಗ್ ಟ್ರಸ್ಟಿ ಧರ್ಮ ವಿಜೇತ್ ಉದ್ಘಾಟಿಸಿ ಮಾತನಾಡಿ ತಾಲೂಕಿನಲ್ಲಿ ಅತೀ ಹೆಚ್ಚು ಜನ ಸಂಖ್ಯೆ ಇರುವ ಸಮಾಜ ಬಾಂಧವರು ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇದರ ಯಶಸ್ಸಿಗೆ ಎಲ್ಲರೂ ಒತ್ತು ನೀಡಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಕ್ರೀಡಾ ಸಮಿತಿಯ ಪ್ರಧಾನ ಸಂಚಾಲಕ ಜಯವಿಕ್ರಮ ಕಲ್ಲಾಪು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಸಂಧ್ಯಾ ಸಚಿನ್ ನೂಜೋಡಿ, ಧಾರ್ಮಿಕ ದತ್ತಿ ಪರಿಷತ್ ಸದಸ್ಯ ಮುಕುಂದ ಸುವರ್ಣ, ಬೆಳ್ತಂಗಡಿ ನ.ಪಂ ಸದಸ್ಯೆ ತುಳಸಿ ಕರುಣಾಕರ್ ಭಾಗವಹಿಸಿದ್ದರು. ಶ್ರೀ ಗುರುದೇವ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ಪ ಪೂಜಾರಿ, ಸಂಘದ ಉಪಾಧ್ಯಕ್ಷೆ, ಬಿಲ್ಲವ ಮಹಿಳಾ ವೇದಿಕೆಯ ಸ್ಥಾಪಕ ಅಧ್ಯಕ್ಷೆ ಸುಜೀತಾ ವಿ.ಬಂಗೇರ, ಬಿಲ್ಲವ ಮಹಿಳಾ ವೇದಿಕೆಯ ಅಧ್ಯಕ್ಷೆ ರಾಜಶ್ರೀ ರಮಣ್, ಯುವಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರ್, ಬೆಳ್ತಂಗಡಿ ದೈಹಿಕ ಪರಿವೀಕ್ಷಾಣಾಧಿಕಾರಿ ಯಶೋಧರ ಸುವರ್ಣ, ಸಂಘದ ಕೋಶಾಧಿಕಾರಿ ಶೇಖರ ಬಂಗೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಗುರುದೇವ ಕಾಲೇಜಿನ ಉಪನ್ಯಾಸಕ ವಿನಯಕುಮಾರ್ ಕಾರ್ಯಕ್ರಮ ನಿರೂಪಿಸಿ, ಸಂಘದ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ವಂದಿಸಿದರು. ಬಳಿಕ ವಿವಿಧ ಸ್ಪರ್ಧೆಗಳು ನಡೆಯಿತು. ಸಂಘದ ನಿರ್ದೇಶಕರುಗಳು, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಸದಸ್ಯರುಗಳು ಕ್ರೀಡಾಸಮಿತಿಯ ಪದಾಧಿಕಾರಿಗಳು ಗ್ರಾಮ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದು ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.