ಬಿಜೆಪಿಯಿಂದ ಆಪರೇಷನ್ ಕಮಲ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯದಲ್ಲಿ ಅಪರೇಶನ್ ಕಮಲದಿಂದ ಸರಕಾರ ರಚಿಸುವ ಯಾವುದೇ ಉದ್ದೇಶವನ್ನು ಬಿಜೆಪಿ ಪಕ್ಷ ಹೊಂದಿಲ್ಲ. ರಾಜ್ಯದ ಕಾಂಗ್ರೆಸ್ ಸರಕಾರ ಅವರಿಂದಾಗಿಯೇ ಬಿದ್ದು ಹೋದರೆ ಅದಕ್ಕೆ ಬಿಜೆಪಿ ಹೊಣೆಯಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಡಿ.31ರಂದು ಬಿಜೆಪಿ ತಾಲೂಕು ಕಚೇರಿಗೆ ಭೇಟಿ ನೀಡಿ, ಸುದ್ದಿಗಾರ ಜೊತೆ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿಯ ತಯಾರಿ ನಡೆಯುತ್ತಿದ್ದು, ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಹೇಳಿದರು.
ಕೇಂದ್ರದಲ್ಲಿ ಮೋದಿ ಪ್ರಧಾನಿ ಆದ ಬಳಿಕ ದೇಶದ ಘನತೆ-ಗೌರವ ಹೆಚ್ಚಿದೆ. ಅಭಿವೃದ್ಧಿ ಸೂಚಂಕ ಏರಿದೆ. ಪ್ರಧಾನಿಗೆ ವಿಶ್ವದಲ್ಲಿ ಗೌರವ ದೊರಕುತ್ತಿದೆ. ಬದಲಾಗುತ್ತಿರುವ ಭಾರತದ ಬಗ್ಗೆ ವಿಶ್ವದ ನಾಯಕರಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆನೇಕ ಕ್ರಾಂತಿಕಾರಿ ಬದಲಾವಣೆಗಳನ್ನು ಪ್ರಧಾನಿಯವರು ತಂದಿದ್ದಾರೆ. ಇವುಗಳನ್ನು ಜನರ ಮನೆ, ಮನೆಗಳಿಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ತಿಳಿಸಿದರು.
ನಮ್ಮ ದೇಶದ 18 ಸಾವಿರ ಹಳ್ಳಿಗಳಿಗೆ ವಿದ್ಯುತ್ ಇರಲಿಲ್ಲ. ಮೋದಿಯವರು ಪ್ರಧಾನಿಯಾಗಿ 3  ವರ್ಷದಲ್ಲಿ ದೀನದಯಾಳ್ ಯೋಜನೆಯಲ್ಲಿ ದೇಶದಲ್ಲಿ ವಿದ್ಯುತ್ ಇಲ್ಲದ ಮನೆಗಳಿಗೆ ವಿದ್ಯುತ್ ವ್ಯವಸ್ಥೆ ಮಾಡಿದ್ದಾರೆ. ಸೌಭಾಗ್ಯ ಯೋಜನೆ ಮೂಲಕ ಉಚಿತವಾಗಿ ಬಡವರ ಮನೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ ಇದು ಬಡವರಿಗೆ ಬಹುದೊಡ್ಡ ವರದಾನವಾಗಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೊಟ್ಯಾನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೀತಾರಾಮ ಎಸ್, ಪ್ರಮುಖರಾದ ಪ್ರಭಾಕರ ಶೆಟ್ಟಿ ಉಪ್ಪಡ್ಕ ಉಪಸ್ಥಿತರಿದ್ದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.