ಬದನಾಜೆ ಶಾಲಾ ನಿವೃತ್ತ ಮುಖ್ಯಶಿಕ್ಷಕ ಲಕ್ಷ್ಮಣ ಪೂಜಾರಿಯವರಿಗೆ ಬೀಳ್ಕೊಡುಗೆ

ಉಜಿರೆ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾಗಿ ಕಾರ್ಯನಿರ್ವಹಿಸಿ ವಯೋನಿವೃತ್ತರಾದ ಬಿ. ಲಕ್ಷ್ಮಣ ಪೂಜಾರಿಯವರಿಗೆ ಡಿ.31 ರಂದು ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಜರುಗಿತು.
ಸಮಾರಂಭದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾ.ಪಂ ಉಪಾಧ್ಯಕ್ಷೆ ವಿನುತಾ ಆರ್.ಗೌಡ, ಶಿಕ್ಷಣ ಸಂಯೋಜಕಿ ಲಲಿತಾ, ನಿವೃತ್ತ ಶಿಕ್ಷಣ ಸಂಯೋಜಕ ಬಾಬುಗೌಡ ಬಾಜಿಮಾರು, ಸಿ.ಆರ್.ಪಿ ಸುರೇಶ್ ಆಚಾರ್ ಭಾಗವಹಿಸಿ ಶುಭಹಾರೈಸಿದರು. ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶಿವಶಂಕರ್ ಭಟ್, ತಾಲೂಕು ಅಧ್ಯಕ್ಷ ಪ್ರಭಾಕರ ನಾರಾವಿ ಭಾಗವಹಿಸಿ ನಿವೃತ್ತರಿಗೆ ಶುಭ ಹಾರೈಸಿದರು. ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಅಭಿನಂದನಾ ಭಾಷಣಗೈದರು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಬಿ.ಎಂ ಇಲ್ಯಾಸ್, ಉಪಾಧ್ಯಕ್ಷೆ ಭಾರತಿ ಉಮೇಶ್, ಪ್ರಗತಿ ಯುವಕ ಮಂಡಲದ ಅಧ್ಯಕ್ಷ ಸೋಮಶೇಖರ್ ಯುವತಿ ಮಂಡಲದ ಅಧ್ಯಕ್ಷೆ ಗೀತಾ ಉಪಾಧ್ಯಾಯ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೋಹನ ಪರಂಗಾಜೆ, ಕಾರ್ಯದರ್ಶಿ ಗೋಪಾಲ ಮಾಸ್ಟ್ರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸವಿತಾ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಹಳೆ ವಿದ್ಯಾರ್ಥಿಗಳು, ಹೆತ್ತವರು, ಉಜಿರೆ ಕ್ಲಸ್ಟರಿನ ಎಲ್ಲಾ ಮುಖ್ಯೋಪಾಧ್ಯಾಯರು, ಊರವರು ಉಪಸ್ಥಿತರಿದ್ದರು. ಜಯಂತಿ ಕೆ. ಸ್ವಾಗತಿಸಿದರು.
ಹಿರಿಯ ಶಿಕ್ಷಕ ವಿಠಲ ಎಂ. ಪ್ರಾಸ್ತಾವಿಕವಾಗಿ ಮಾತನಾಡಿ ಮೋಹನ್ ಪರಂಗಾಜೆ ವಂದಿಸಿದರು. ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಲಕ್ಷ್ಮಣ ಪೂಜಾರಿಯವರು ತನ್ನ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಭಡ್ತಿಗೊಂಡ ಮೇಧಾ ಕೆ. ಇವರನ್ನು ಸನ್ಮಾನಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.