ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಕಾರ್ಯಾಗಾರ ಅಗತ್ಯ – ಬಂಗೇರ

ಬೆಳ್ತಂಗಡಿ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಶೈಕ್ಷಣಿಕ ಸಮಿತಿ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಇದರ ಸಹಯೋಗದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಹಕಾರದಲ್ಲಿ ಎಸ್.ಎಸ್.ಎಲ್.ಸಿ ವ್ಯಾಸಾಂಗ ಮಾಡುತ್ತಿರುವ ತಾಲೂಕಿನ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟನೆ ಜ.6 ರಂದು ಶ್ರೀ ನಾರಾಯಣಗುರು ಸೇವಾ ಸಂಘದ ಆಶಾ ಸಾಲ್ಯಾನ್ ಕಲ್ಯಾಣ ಮಂಟಪದಲ್ಲಿ ಜರುಗಿತು.
ಕಾರ್ಯಾಗಾರವನ್ನು ಮಾಜಿ ಶಾಸಕ ಹಾಗೂ ಸಂಘದ ಗೌರವಾಧ್ಯಕ್ಷ ಕೆ.ವಸಂತ ಬಂಗೇರ ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ಮುಂದಿನ ಭವಿಷ್ಯಕ್ಕಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಾಗಾರದ ಉದ್ದೇಶ ಫಲಗೊಳಿಸಲು ವಿದ್ಯಾರ್ಥಿಗಳು ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಬೇಕು. ಸಂಘವು ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ತರಬೇತಿ ಪಡೆದು ಉತ್ತಮ ನಾಗರಿಕರಾಗಿ ಬದುಕುವ ಛಲ ಹೊಂದಬೇಕು ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಗೌರವಾಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ವಹಿಸಿದ್ದರು. ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕ ರಮೇಶ್.ಕೆ ಅಳದಂಗಡಿ ಸರಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಯಶೋಧರ ಸುವರ್ಣ, ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ಸಂಘದ ಮಾಜಿ ಅಧ್ಯಕ್ಷ ಪೀತಾಂಬರ ಹೇರಾಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉತ್ಪಾರು, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ರಾಜಶ್ರೀ ರಮಣ್ ಉಪಸ್ಥಿತರಿದ್ದರು. ತರಬೇತುದಾರ ಸುಧಾಕರ ಕಾರ್ಕಳ ದಿಕ್ಸೂಚಿ ಭಾಷಣ ಮಾಡಿ ಪರೀಕ್ಷೆಯ ಗುಟ್ಟುಗಳು ವಿಚಾರದ ಬಗ್ಗೆ ಮಾಹಿತಿ ನೀಡಿದರು.
ಶೈಕ್ಷಣಿಕ ಸಮಿತಿಯ ಪ್ರಧಾನ ಸಂಚಾಲಕರು. ಸಂಘದ ಉಪಾಧ್ಯಕ್ಷೆ, ಸುಚಿತಾ. ವಿ. ಬಂಗೇರ ಸ್ವಾಗತಿಸಿ ಸಂಘದ ಪ್ರಧಾನ ಕಾರ್ಯದರ್ಶಿ ರಾಕೇಶ್ ಮೂಡುಕೋಡಿ ಪ್ರಸ್ತಾವಿಕವಾಗಿ ಮಾತನಾಡಿದರು. ಉಪನ್ಯಾಸಕ ಅರುಣ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು. ಶೈಕ್ಷಣಿಕ ಕಾರ್ಯಾಗಾರಕ್ಕೆ ಸಹಕಾರ ನೀಡುತ್ತಿರುವ ಶಿಕ್ಷರುಗಳಾದ ನಡ ಪ್ರೌಢಶಾಲಾ ಶೈರ್ಮಿಳಾ, ಶಿವಾನಂದ ಅಳದಂಗಡಿ, ಸತೀಶ್ ಕಾರ್ಯತಡ್ಕ, ರಾಮಚಂದ್ರ ದೊಡ್ಡಮನೆ ಕೊಯ್ಯೂರು, ನಾಗರಾಜ್ ಕೊಯ್ಯೂರು, ಅರುಣ್ ಕೋಟ್ಯಾನ್, ವಿನಯಕುಮಾರ್ ಗುರುದೇವ ಕಾಲೇಜು, ಗಣೇಶ್ ಬಳಂಜ, ನಿರೂಪಮಾ ಪಡಂಗಡಿ, ಸುಧಾಕರ್ ಇವರುಗಳನ್ನು ಗೌರವಾಧ್ಯಕ್ಷರು ಗೌರವಿಸಿದರು. ಈ ಶೈಕ್ಷಣಿಕ ಕಾರ್ಯಾಗಾರ ಪ್ರತಿ ಆದಿತ್ಯವಾರ ಶ್ರೀ ಗುರುದೇವ ಕಾಲೇಜಿನಲ್ಲಿ ನಡೆಯಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.