ಪುಂಜಾಲಕಟ್ಟೆ: ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಜಾಥಾ

Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ : ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಜ .5 ರಂದು ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ, ರೆಡ್‌ಕ್ರಾಸ್ ಮತ್ತು ರೇಂಜರ್‍ಸ್ & ರೋವರ್‍ಸ್ ಘಟಕಗಳ ಸಹಯೋಗದೊಂದಿಗೆ ಕಾಲೇಜಿನಿಂದ ಪುಂಜಾಲಕಟ್ಟೆ ಮಾರ್ಗವಾಗಿ ಪಿಲಾತಬೆಟ್ಟು ಗ್ರಾಮ ಪಂಚಾಯಿತಿವರೆಗೆ ಜಾಥಾಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲ  ಪ್ರೋ| ಗಣಪತಿ ಭಟ್ ಕುಳಮರ್ವ  ಮಾತನಾಡಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರದ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಲು ಹಾಗು ಇತರರನ್ನು ಪ್ರೇರೇಪಿಸಲು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್‌ನ ಸದಸ್ಯರು, ಸ್ವೀಪ್‌ನ ರಾಯಭಾರಿಗಳು, ರಾಷ್ಟ್ರೀಯ ಸೇವಾ ಯೋಜನೆ ಘಟಕದ 80ವಿದ್ಯಾರ್ಥಿಗಳು, ರೆಡ್‌ಕ್ರಾಸ್ ಘಟಕದ 70ವಿದ್ಯಾರ್ಥಿಗಳು ಹಾಗು ರೇಂಜರ್‍ಸ್ & ರೋವರ್‍ಸ್ ಘಟಕದ 30 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು .

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.