HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಜ.16 ಅಳದಂಗಡಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ: ಡಾ ಪದ್ಮಪ್ರಸಾದ್ ಅಜಿಲ

ಸಾಧಕರಿಗೆ ಸನ್ಮಾನ; ಗೋಷ್ಠಿಗಳ ಬದಲು ಉಪನ್ಯಾಸ ಮಾಲಿಕೆ

ಬೆಳ್ತಂಗಡಿ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ವತಿಯಿಂದ ನಡೆಯುವ 16 ನೇಯ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಜ.16 ರಂದು ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನ ಸನಿಹದ ಅರಮನೆ ಮೈದಾನದಲ್ಲಿ ನಡೆಯಲಿದೆ. ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳ ಬದಲಾಗಿ ಮೌಲಿಕ ಮತ್ತು ಸಕಾಲಿಕ ಉಪನ್ಯಾಸಗಳಿಗೆ ಅಧ್ಯತೆ ನೀಡಲಾಗಿದೆ. ಸಾಧರಿಗೆ ಸನ್ಮಾನ, ಮಧ್ಯಂತರ ಅವಧಿಗಳಲ್ಲಿ ಸ್ಥಳೀಯ ಮತ್ತು ಆಯ್ದ ಪ್ರತಿಭೆಗಳ ಪ್ರತಿಭಾ ಪ್ರದರ್ಶನ ಹಾಗೂ ಸಾಹಿತ್ಯ ಪೂರಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಸಮ್ಮೇಳನ ಸಂಯೋಜನಾ ಸಮಿತಿ ಗೌರವಾಧ್ಯಕ್ಷರೂ ಆಗಿರುವ ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸ ಡಾ. ಪದ್ಮಪ್ರಸಾದ ಅಜಿಲ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಹಿರಿಯ ಸಾಹಿತಿ ಪ. ರಾಮಕೃಷ್ಣ ಶಾಸ್ತ್ರಿ ಸರ್ವಾಧ್ಯಕ್ಷತೆ ವಹಿಸಲಿದ್ದಾರೆ. ವಿದ್ವಾಂಸರಾದ ಪಿ ತುಕರಾಮ ಪೂಜಾರಿ ಬಂಟ್ವಾಳ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಹರೀಶ್ ಪೂಂಜ ಚಾರುಮುಡಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ.
ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ, ನಿಕಟ ಪೂರ್ವ ಸಮ್ಮೇಳನಾಧ್ಯಕ್ಷ ಎಂ ಬಾಬು ಶೆಟ್ಟಿ ನಾರಾವಿ ಉಪಸ್ಥಿತರಿರಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಪ್ರದೀಪ ಕುಮಾರ್ ಕಲ್ಕೂರ ಆಶಯ ನುಡಿ ಆಡಲಿದ್ದು, ತಾ. ಕಸಾಪ ಅಧ್ಯಕ್ಷ ಡಾ. ಬಿ ಯಶೋವರ್ಮ ಪ್ರಸ್ತಾವನೆಗೈಯ್ಯಲಿದ್ದಾರೆ. ಸ್ಥಳೀಯ ಪಂ. ಅಧ್ಯಕ್ಷ ಸತೀಶ ಮಿತ್ತಮಾರು ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು. ಸಮಾರೋಪ ಸಮಾರಂಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಜಿ.ಪಂ ಸದಸ್ಯ ಶೇಖರ ಕುಕ್ಕೇಡಿ, ತಾ.ಪಂ ಸದಸ್ಯೆ ವಿನುಷಾ ಪ್ರಕಾಶ್ ಭಾಗಿಯಾಗಲಿದ್ದಾರೆ. ಖ್ಯಾತ ಸಾಹಿತಿ ಭುವನೇಶ್ವರೀ ಹೆಗಡೆ ಸಮಾರೋಪ ಭಾಷಣ ಮಾಡಲಿದ್ದಾರೆ. ಈ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 12 ಮಂದಿ ಸಾಧಕರನ್ನು ಗುರುತಿಸುವ ಕಾರ್ಯ ಕೂಡ ನಡೆಯಲಿದೆ ಎಂದರು. ಗೋಷ್ಠಿಯಲ್ಲಿ ಸಂಯೋಜನಾ ಸಮಿತಿ ಅಧ್ಯಕ್ಷ ಶಿವಪ್ರಸಾದ್ ಅಜಿಲ, ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ. ಎಂ.ಪಿ ಶ್ರೀನಾಥ್, ತಾ| ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಬೆಳಾಲು ಮತ್ತು ಅಶ್ರಫ್ ಆಲಿಕುಂಞಿ, ಸಂ. ಸಮಿತಿ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ಪಿ.ಎಚ್ ಮತ್ತು ಸಂದೀಪ್ ಎಸ್.ಎನ್ ಅರುವ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.