ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಧರ್ಮಸ್ಥಳ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಅಮೇರಿಕಾದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ13 ಮಂದಿ ವಿದ್ಯಾರ್ಥಿಗಳು ಜ.6 ರಂದು ಧರ್ಮಸ್ಥಳಕ್ಕೆ ಆಗಮಿಸಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಛೇರಿಗೆ ಭೇಟಿ ನೀಡಿದರು. ಈ ಸಂಧರ್ಭ ಕಾರ್ಯನಿರ್ವಾಹಕ ನಿರ್ದೇಶಕ ಡಾ|ಎಲ್.ಎಚ್.ಮಂಜುನಾಥ್ ಗ್ರಾಮಾಭಿವೃದ್ಧಿ ಯೋಜನೆಯ ಕುರಿತು ಸಮಗ್ರ ಮಾಹಿತಿಯನ್ನು ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ|ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾರ್ಗದರ್ಶನ ಪಡೆದರು. ಬಳಿಕ ಕ್ಷೇತ್ರದಲ್ಲಿರುವ ವಿವಿಧ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಿ ಎಲ್ಲಾ ಕಾರ್ಯಕ್ರಮಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಶ್ರೀಮತಿ ಮಮತಾ ಹರೀಶ್ ರಾವ್, ಪೆನ್ಸಿಲ್ವೇನಿಯ ಯುನಿವರ್ಸಿಟಿಯ ಪ್ರೊ.ಫೆಮಿನಾ ಆಡಿ, ನಿಟ್ಟೆ ಕಾಲೇಜಿನ ಉಪನ್ಯಾಸಕ ವಿನೋದ್ ದೀಕ್ಷಿತ್, ಮಾನವ ಸಂಪನ್ಮೂಲ ವಿಭಾಗದ ಪ್ರಬಂಧಕ ತೋಷತ್ ಕುಮಾರ್, ಗ್ರಾಮೀಣ ಶ್ರೇಷ್ಠತಾ ಕೇಂದ್ರದ ಉಪನ್ಯಾಸಕ ರಾಜೇಶ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.