ಜಿಲ್ಲಾ ಮಟ್ಟದ ಪುರುಷರ ಮುಕ್ತ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನೆ

ಮಡಂತ್ಯಾರು: ಕ್ರೀಡೆ ಪ್ರತಿಯೊಬ್ಬ ವ್ಯಕ್ತಿಯ ಜೀವನದ ಅವಿಭಾಜ್ಯ ಅಂಗ. ಮಾನಸಿಕ, ಆಧ್ಯಾತ್ಮಿಕವಾಗಿ ದೃಢತೆ ಇದ್ದರೆ ಸಾಲದು. ದೈಹಿಕವಾಗಿ ದೃಢತೆ ಲಭಿಸಬೇಕಾದರೆ ಒಂದಲ್ಲ ಒಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಯಿಂದ ಸರ್ವಾಂಗೀಣ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಮುಖ್ಯ ಮಂತ್ರಿಯವರ ಉಪಕಾರ್ಯದರ್ಶಿ ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿ ಅರುಣ್ ಫುರ್ಟಾಡೊ ಹೇಳಿದರು.
ಅವರು ಬಾಲ್ ಬ್ಯಾಡ್ಮಿಂಟನ್ ಕ್ಲಬ್ ಮಡಂತ್ಯಾರು ಇದರ ವತಿಯಿಂದ ಜರುಗಿದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪುರುಷರ ಮುಕ್ತ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಆಟೋಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ, ಕ್ರೀಡೆಯಲ್ಲಿ ತೊಡಗಿಸಿಕೊಂಡ ಕ್ರೀಡಾಪಟು ಯಾವತ್ತೂ ತನ್ನ ವೈಯಕ್ತಿಕ ಜೀವನದಲ್ಲಿ ಹಿಂದೆ ಬಿದ್ದಿಲ್ಲ. ಬಾಲ್ ಬ್ಯಾಡ್ಮಿಂಟನ್ ಕ್ರೀಡೆಯು ಹೆಚ್ಚಿನ ಜನಪ್ರಿಯತೆ ಪಡೆಯುವಂತಾಗ ಬೇಕು ಎಂದು ಅವರು ನುಡಿದರು.
ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚ್ ಸಹಾಯಕ ಧರ್ಮ ಗುರು ವಂ| ಫಾ| ಆಲ್ವಿನ್ ರಿಚರ್ಡ್ ಡಿಸೋಜ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ರಾಜಶೇಖರ ಶೆಟ್ಟಿ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ಉಪಸ್ಥಿತರಿದ್ದರು.ಈ ಸಂದರ್ಭದಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಕೆ.ಜನಾರ್ಧನ ಗೌಡರನ್ನುಸನ್ಮಾನಿಸಲಾಯಿತು.
ಅಬ್ದುಲ್ ರಶೀದ್ ಸ್ವಾಗತಿಸಿ, ಕು.ಹಸೀನಾ ಬಾನು ವಂದಿಸಿ, ವಸಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ವಿಲ್ಸನ್ ಮೊರಸ್ ಪಂದ್ಯಾಟದ ಸಂಚಾಲಕರಾಗಿ ಸಹಕರಿಸಿದರು. ಈ ಪಂದ್ಯಾಟದಲ್ಲಿ ಬ್ಯಾಡ್ಮಿಂಟನ್ ಕ್ಲಬ್ ಮಡಂತ್ಯಾರು ಪ್ರಥಮ ಹಾಗೂ ಎಸ್ ಡಿಪಿಟಿ ಕಟೀಲು ದ್ವೀತಿಯ ಸ್ಥಾನ ಪಡೆದುಕೊಂಡಿತು. ಹಿರಿಯ ಬ್ಯಾಡ್ಮಿಂಟನ್ ಆಟಗಾರರು ಭಾಗವಹಿಸಿದ್ದು ಪಂದ್ಯಾಟದ ವಿಶೇಷವಾಗಿತ್ತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.