ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಾಲಯದಲ್ಲಿ ಜಾತ್ರಾಮಹೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಈ ಸಂದರ್ಭದಲ್ಲಿ ಸಾಮಾಜಿಕ ವಿಭಾಗದಲ್ಲಿ ಸಾಧನೆಗೈದ ಧರ್ಮಸ್ಥಳ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ| ಜಯಕೀರ್ತಿ ಜೈನ್ ರನ್ನು ಸನ್ಮಾನಿಸಲಾಯಿತು
ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು.

ಪಟ್ರಮೆ: ಇಲ್ಲಿಯ ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವವು ಜ.14 ರಂದು ನೀಲೇಶ್ವರದ ಬ್ರಹ್ಮಶ್ರೀ ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭಗೊಂಡಿತು.
ನಂತರ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಳದ ಆನುವಂಶಿಕ ಆಡಳಿತ ಮೊಕ್ತೇಸರ ನಿತೇಶ್ ಬಲ್ಲಾಳ್ ಉಳಿಯಬೀಡು ವಹಿಸಿದ್ದರು. ಈ ಸಂದರ್ಭದಲ್ಲಿ ಸಾಮಾಜಿಕ ವಿಭಾಗದಲ್ಲಿ ಸಾಧನೆಗೈದ ಧರ್ಮಸ್ಥಳ ಜಾನುವಾರು ಅಭಿವೃದ್ಧಿ ಅಧಿಕಾರಿ ಡಾ| ಜಯಕೀರ್ತಿ ಜೈನ್, ಕ್ರೀಡಾ ವಿಭಾಗದಲ್ಲಿ ಉನ್ನತ ಸಾಧನೆ ಮಾಡಿದ ಕು| ಅಕ್ಷತಾ ಹಾಗೂ ಶೈಕ್ಷಣಿಕ ವಿಭಾಗದಲ್ಲಿ ಉನ್ನತ ಸಾಧನೆ ಮಾಡಿದ ಪ್ರದೀಪ್ತಾ ಆರ್ ಜೈನ್ ಇವರುಗಳನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಪವಿತ್ರಪಾಣಿ ಶ್ರೀಧರ ಶಬರಾಯ ಅಕ್ಕೋ ಚಾವಡಿ, ಜಾತ್ರಾ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ ಗೌಡ, ಕಾರ್ಯದರ್ಶಿ ಪ್ರಸನ್ನ ಪದಳ, ಅರ್ಚಕ ಶ್ರೀಪತಿ ಭಟ್ ಉಪಸ್ಥಿತರಿದ್ದರು.
ಸಭಾಕಾರ್ಯಕ್ರಮದ ನಂತರ ಅನಾರು, ಸುರ್ಯತ್ತಾವು ಅಂಗನವಾಡಿ ಕೇಂದ್ರ ಹಾಗೂ ಹಿ.ಪ್ರಾ.ಶಾಲಾ ಮಕ್ಕಳಿಂದ ಹಾಗೂ ಊರ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.