ಸ್ಮಿತೇಶ್ ಎಸ್ ಬಾರ್ಯರಿಗೆ ಜಿಲ್ಲಾ ಯುವ ಪ್ರಶಸ್ತಿ

ಬೆಳ್ತಂಗಡಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು, ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು, ಬಂಟ್ವಾಳ, ಮಂಗಳೂರು, ಬೆಳ್ತಂಗಡಿ, ಯುವಜನ ಸಂಯುಕ್ತ ಮಂಡಳಿ ಸುಳ್ಯ, ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜು ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ. ಜಿಲ್ಲಾ ಯುವಜನ ಒಕ್ಕೂಟ ಮಂಗಳೂರು ಇದರ ವತಿಯಿಂದ, ಸ್ವಾಮಿ ವಿವೇಕಾನಂದರ 156 ನೇ ಜನ್ಮ ದಿನಾಚರಣೆ ಹಾಗೂ ರಾಜ್ಯ ಯುವ ಪ್ರಶಸ್ತಿ, ರಾಜ್ಯದ ಅತ್ಯುತ್ತಮ ಸಂಸ್ಥೆ ಪ್ರಶಸ್ತಿ ಪ್ರದಾನ ಸಮಾರಂಭವು ಜ.12 ರಂದು ಪುತ್ತೂರು ತಾಲೂಕಿನ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸ್ಮಿತೇಶ್ ಎಸ್.ಬಾರ್ಯ ಇವರಿಗೆ ಜಿಲ್ಲಾ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಇವರು ಶ್ರೀಗುರು ಮಿತ್ರ ಸಮೂಹದ ಅಧ್ಯಕ್ಷರಾಗಿದ್ದು, ಹಲವಾರು ಕಿರುಚಿತ್ರಗಳು ಹಾಗೂ ನಾಟಕಗಳ ನಿರ್ದೇಶಕರಾಗಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಪ್ರತಿಭಾನ್ವಿತರು. ಇವರು ಪ್ರಸ್ತುತ ಎಸ್.ಡಿ.ಎಂ. ಕಾಲೇಜು ಉಜಿರೆ ಇಲ್ಲಿ ಮನಃಶಾಸ್ತ್ರ ಉಪನ್ಯಾಸ ಕರಾಗಿ ಕಾರ್‍ಯನಿರ್ವಹಿಸುದ್ದಾರೆ. ಇವರು ಬೆಳ್ತಂಗಡಿ ಹಳೆಕೋಟೆ ಸುಂದರ ಪೂಜಾರಿ ಮತ್ತು ರತ್ನ ದಂಪತಿ ಪುತ್ರರಾಗಿರುತ್ತಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.