ತಾಲೂಕು ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ, ಶೈಕ್ಷಣಿಕ ಸಂವಾದ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು, ದ.ಕ.ಜಿಲ್ಲಾ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಸಂಘದ ವಾರ್ಷಿಕ ಮಹಾಸಭೆ ಹಾಗೂ ಶೈಕ್ಷಣಿಕ ಸಂವಾದ ಕಾರ್ಯಕ್ರಮವು ಜ.19 ರಂದು ವಾಣಿ ಆಂಗ್ಲ ಮಾಧ್ಯಮ ಶಾಲಾ ಸಭಾಭವನದಲ್ಲಿ ಜರುಗಿತು.
ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಪ್ರಭಾಕರ ನಾರಾವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್ ಕೆ, ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಮಲ್ಲಾರ, ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಸಂಪನ್ಮೂಲ ವ್ಯಕ್ತಿಯಾಗಿ ಪ್ರಥಮ ದರ್ಜೆ ಸಹಾಯಕ ಪ್ರವೀಣ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಸಮಿತಿ ಪ್ರಧಾನ ಕಾರ್ಯದರ್ಶಿ ರಘುಪತಿ ಕೆ.ರಾವ್, ವಾಣಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ, ಪ್ರಭಾಕರ ಹೆಗ್ಡೆ ಹಟ್ಟಾಜೆ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.