ಬೆಳ್ತಂಗಡಿ: ಪ್ರತಿಷ್ಠಿತ ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದೊಂದಿಗೆ ರಾಷ್ಟ್ರೀಯ ಯುವ ದಿನಾಚರಣೆಯನ್ನು ಜ.19 ರಂದು ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಚರಿಸಲಾಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಿರಿಯ ವಕೀಲ ಪ್ರತಾಪ್ಸಿಂಹ ನಾಯಕ್ ಸ್ವಾಮಿ ವಿವೇಕಾನಂದರ ತತ್ವ-ಆದರ್ಶಗಳು ಭಾರತದ ಯುವ ಜನತೆಯ ದೊಡ್ಡ ಸಂಪನ್ಮೂಲ ಹಾಗೂ ಸ್ಪೂರ್ತಿಯ ಮೂಲ ಎಂದರು.
ವೇದಿಕೆಯಲ್ಲಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ| ರಾಘವ, ಜೇಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಪ್ರಶಾಂತ್ ಲಾಲ, ವಲಯಾಧಿಕಾರಿ ಚಿದಾನಂದ ಇಡ್ಯ, ನಿಕಟಪೂರ್ವಾಧ್ಯಕ್ಷ ಕಿರಣ್ ಕುಮಾರ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಶಂಕರ್ ರಾವ್, ಜೂನಿಯರ್ ಜೇಸಿ ಅಧ್ಯಕ್ಷ ವಿನಾಯಕ ಪ್ರಸಾದ್ ಉಪಸ್ಥಿತರಿದ್ದರು.
ಪೂರ್ವಾಧ್ಯಕ್ಷ ಸಂತೋಷ್.ಪಿ ಕೋಟ್ಯಾನ್ ವೇದಿಕೆಗೆ ಆಹ್ವಾನಿಸಿದರು. ಉಪಾಧ್ಯಕ್ಷ ಸ್ವರೂಪ್ ಶೇಖರ್, ಸುಶೀಲ್ ಕುಮಾರ್ ಅತಿಥಿಗಳ ಪರಿಚಯವಿತ್ತರು. ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿಗಳು ಅನಿಸಿಕೆ ವ್ಯಕ್ತಪಡಿಸಿದರು. ಶಂಕರ್ ರಾವ್ ವಂದಿಸಿದರು.